Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ರಾಜ್ಯ ನಾಯಕರಿಗೆ ಅಮಿತ್ ಶಾ ಸೂಚನೆ ನೀಡಿದ್ದು, ಮುಂದೆ ಬರುತ್ತಿರುವ ಚುನಾವಣೆಗಳಿಗೆ ಸಿದ್ಧರಾಗಿ ಎಂದಿದ್ದಾರೆ. ಅಲ್ಲದೇ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಹತ್ಯೆ ಪ್ರಕರಣಗಳಿಂದ ಪಕ್ಷಕ್ಕಾಗುತ್ತಿರುವ ನಕಾರಾತ್ಮಕ ಅಂಶಗಳನ್ನು ಗಂಭೀರವಾಗಿ ಪರಿಗಣಿಸಬೇಕು, ಈ ವಿಚಾರದಲ್ಲಿ ದಿಟ್ಟ ನಿರ್ಧಾರ ಕೈಗೊಳ್ಳುವ ಮೂಲಕ ಕಾರ್ಯಕರ್ತರ ಅಸಮಾಧಾನ ಶಮನಗೊಳಿಸಿ ಪಕ್ಷವನ್ನು ಚುನಾವಣೆಗೆ ಸಜ್ಜುಗೊಳಿಸಬೇಕು ಎಂದು ರಾಜ್ಯ ಘಟಕಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ್ದಾರೆ. ಹಿಂದೂಪರ ಸಂಘಟನೆ ಮುಖಂಡರ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸರ್ಕಾರ ದಿಟ್ಟ ನಿರ್ಧಾರ ಕೈಗೊಳ್ಳಬೇಕು. ಜೊತೆಗೆ ಇತರ ಕೋಮಿನ ರಾಜಕೀಯ ಕಾರಣದ ಹತ್ಯೆಗಳನ್ನೂ ಗಂಭೀರವಾಗಿ ಪರಿಗಣಿಸಬೇಕು, ಯಾವುದೇ ಕಾರಣಕ್ಕೂ ಶಾಂತಿ ಸುವ್ಯವಸ್ಥೆ ಹದಗೆಡದಂತೆ ನೋಡಿಕೊಳ್ಳಬೇಕು, ಚುನಾವಣಾ ವರ್ಷದಲ್ಲಿ ಕಾನೂನು ಸುವ್ಯವಸ್ಥೆ ವಿಚಾರ ಬಹಳ ಮುಖ್ಯವಾಗಿರಲಿದೆ ಎಂದಿದ್ದಾರೆ.