ಸುಪ್ರೀಂಕೋರ್ಟ್ ಮುಂದೆ ನಿತ್ಯ 3000 ಕ್ಯುಸೆಕ್ ನೀರು ಹರಿಸಬೇಕೆಂಬ ಆದೇಶ ಪುನರ್ ಪರಿಶೀಲಿಸುವಂತೆ ಶನಿವಾರವೇ ಅರ್ಜಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರತೆ. ಮಳೆ ಕೊರತೆಯಿಂದ ಜಲಾಶಯಗಳಲ್ಲಿ ನೀರಿಲ್ಲದೆ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಕಾನೂನಾತ್ಮಕವಾಗಿ ಸಮರ್ಥವಾಗಿ ನಿಭಾಯಿಸುವುದು ಹೇಗೆ ಎಂಬ ಬಗ್ಗೆ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಗಳು, ಮಾಜಿ ಹಾಲಿ ಅಡ್ವೊಕೇಟ್ ಜನರಲ್‌ಗಳು, ಸುಪ್ರಿಂಕೋರ್ಟ್‌ನ ಕೆಲ ಹಿರಿಯ ವಕೀಲರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ ಅವರು, ತಮಿಳುನಾಡಿಗೆ 3000 ಕ್ಯುಸೆಕ್ ನೀರು ಬಿಡುವ ಬಗ್ಗೆ ಎರಡೂ ಸಮಿತಿಗಳ ಮುಂದೆ ನಮ್ಮಲ್ಲಿ ನೀರು ಇಲ್ಲ ಹಾಗಾಗಿ ನೀರು ಬಿಡಲು ಸಾಧ್ಯವಿಲ್ಲ ಎಂದು ನಮ್ಮ ಸರ್ಕಾರದ ಪರ ನ್ಯಾಯವಾದಿಗಳು ಹಾಗೂ ಅಧಿಕಾರಿಗಳು ವಾದ ಮಂಡಿಸಿದ್ದಾರೆ.