Publish Date: Mon, 09 Sep 2019 (10:02 IST)
Updated Date: Mon, 09 Sep 2019 (10:04 IST)
ಕಾರವಾರ : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಾಜೀನಾಮೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಜಮ್ಮು-ಕಾಶ್ಮೀರ, ರಾಮಮಂದಿರ ಸೇರಿದಂತೆ ಅನೇಕ ವಿಚಾರದಲ್ಲಿ ಕೇಂದ್ರದ ನಡೆಯನ್ನು ಖಂಡಿಸಿ ಇತ್ತೀಚೆಗೆ ದಕ್ಷಿಣ ಕನ್ನಡದ ದಕ್ಷ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ತಮ್ಮ ವೃತ್ತಿಗೆ ರಾಜೀನಾಮೆ ನೀಡಿದ್ದರು.
ಈ ಬಗ್ಗೆ ಟ್ವೀಟ್ ಮಾಡಿರುವ ಅನಂತ ಕುಮಾರ್ ಹೆಗಡೆ, 'ಐಎಎಸ್ ಅಧಿಕಾರಿ ಸೆಂಥಿಲ್ ಮಾಡಬೇಕಾದ ಮೊದಲ ಕೆಲಸವೆಂದರೆ ಕೂಡಲೇ ತನ್ನ ನಿಲುವನ್ನು ಬೆಂಬಲಿಸಿದವರೊಂದಿಗೆ ಪಾಕಿಸ್ತಾನಕ್ಕೆ ವಲಸೆ ಹೋಗುವುದು! ಇದು ಪ್ರಾಯೋಗಿಕವಾಗಿಯು ಸುಲಭ ಮತ್ತು ಅಂತಿಮ ಪರಿಹಾರ ಕೂಡ. ಇಲ್ಲೇ ಇದ್ದು ದೇಶ ಒಡೆಯುವ ಬದಲು, ಅಲ್ಲಿಗೆ ಹೋಗಿ ನಮ್ಮ ದೇಶ ಮತ್ತು ನಮ್ಮ ಸರ್ಕಾರದ ವಿರುದ್ಧ ನೇರ ಹೋರಾಟ ಮಾಡುವುದು ಒಳಿತು! ಇದರಲ್ಲಾದರು ನಿಯತ್ತು ತೋರಿಸಲಿ' ಎಂದು ತಿಳಿಸಿದ್ದಾರೆ.