Publish Date: Sun, 18 Feb 2018 (12:15 IST)
Updated Date: Sun, 18 Feb 2018 (12:17 IST)
ಬೆಂಗಳೂರು: ಕನ್ನಡ ಮಾತನಾಡುವವರು ಕಡಿಮೆಯಾಗುತ್ತಿದ್ದಾರೆ ಎನ್ನುವ ಮೂಲಕ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿರುವುದಕ್ಕೆ ಸ್ವಪಕ್ಷೀಯರಿಂದಲೇ ವಿರೋಧ ವ್ಯಕ್ತವಾಗಿದೆ.
ಬಿಜೆಪಿ ನಾಯಕ ಸುರೇಶ್ ಕುಮಾರ್ ಈ ಕುರಿತಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು ಕೇಂದ್ರ ಸಚಿವರಾಗಿದ್ದುಕೊಂಡು ಅನಂತಕುಮಾರ್ ಹೆಗ್ಡೆ ನೀಡಿದ ಹೇಳಿಕೆ ಸರಿಯಲ್ಲ. ಅವರ ಜವಾಬ್ದಾರಿ ಅರಿತು ಅವರು ಎಚ್ಚರಿಕೆಯಿಂದ ಮಾತನಾಡಬೇಕು ಎಂದಿದ್ದಾರೆ.
ಅನಂತ ಕುಮಾರ್ ಹೇಳಿಕೆ ಒಪ್ಪತಕ್ಕದ್ದಲ್ಲ. ಪ್ರತಿಯೊಂದು ಭಾಷೆಗೂ ಅದರದ್ದೇ ಆದ ಪ್ರಾಮುಖ್ಯತೆಯಿದೆ. ಅವರ ಇಂತಹ ಹೇಳಿಕೆಯಿಂದ ಹಲವರಿಗೆ ನೋವಾಗಿದೆ ಎಂದು ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ