ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಹೀಗೆ ಮಾಡಲೇಬೇಕಿದೆ.
ಜನರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ರಾಹುಲ ಪಾಂಡ್ವೆ ತಿಳಿಸಿದ್ದಾರೆ.
ಕಲಬುರಗಿ ನಗರದ ಅಜಾದಪುರ ರಸ್ತೆಯಲ್ಲಿ ಜನರು ಅಗತ್ಯ ದಿನಸಿ ವಸ್ತುಗಳನ್ನು ಖರೀದಿಸುತ್ತಿರುವ ವಿವಿಧ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಾರ್ವಜನಿಕರು ಅಂತರ ಕಾಪಾಡಲು ಅಂಗಡಿಗಳ ಮುಂದೆ ಚೌಕಾಕಾರದ ಪರಿಧಿ ನಿಗದಿಪಡಿಸಿದ್ದು, ಅಲ್ಲಿಯೇ ನಿಂತು ಜನರು ಶಾಂತ ರೀತಿಯಿಂದ ತಮಗೆ ಬೇಕಾದ ವಸ್ತುಗಳನ್ನು ಪಡೆಯಬೇಕು. ಯಾವುದೇ ಕಾರಣಕ್ಕೂ ಜನಸಂದಣಿಗೆ ಅವಕಾಶ ಮಾಡಬಾರದು ಎಂದು ಅವರು ಮನವಿ ಮಾಡಿದ್ದಾರೆ.