Publish Date: Fri, 09 Feb 2018 (11:35 IST)
Updated Date: Fri, 09 Feb 2018 (12:00 IST)
ಬೆಂಗಳೂರು: ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಬಿಸಿಯೂಟ ಕಾರ್ಯಕರ್ತೆಯರ ಹೋರಾಟ ಇನ್ನು ಮುಂದುವರಿದಿದೆ. ಈ ಅಹೋರಾತ್ರಿ ಧರಣಿ 5ನೇ ದಿನಕ್ಕೆ ಕಾಲಿಟ್ಟಿದೆ. ಕಣ್ಣೀರಿಟ್ಟು ತಮ್ಮ ಅಳಲನ್ನು ಕಾರ್ಯಕರ್ತೆಯರು ಹೇಳುತ್ತಿದ್ದಾರೆ.
ರಾಜ್ಯಸರ್ಕಾರ ನಮ್ಮ ಗೋಳು ಕೇಳುತ್ತಿಲ್ಲವೆಂದು ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದರು. ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಸಿಎಂ ಗೆ ಒತ್ತಾಯ ಮಾಡುತ್ತಿದ್ದಾರೆ. ಮಕ್ಕಳ ಜತೆ ಹೋರಾಟಕ್ಕೆ ಬಂದಿರುವ ಕಾರ್ಯಕರ್ತೆಯರು. ಸುಡುವ ಬಿಸಿಲನ್ನು ಲೆಕ್ಕಿಸದೇ ಹೋರಾಟ ಮಾಡುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ