ರಾಜಧಾನಿ ಬೆಂಗಳೂರಿ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದೆ. ಇದುವರೆಗೂ ಯಾವುದೇ ಅಧಿಕಾರಿಗಳು ಮನವೊಲಿಸಲು ಕೂಡ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮ ಬೇಡಿಕೆಯನ್ನು ಈಡೇರಿಸದ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೇಡಿಕೆ ಈಡೇರುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಸರ್ಕಾರ ವಿರುದ್ದ ಅಂಗನವಾಡಿ ಕಾರ್ಯಕರ್ತೆಯರು ರೊಚ್ಚಿಗೆದ್ದಿದ್ದಾರೆ. ನಿನ್ನೆಯಿಂದ ಅಹೋರಾತ್ರಿ ಪ್ರತಿಭಟನೆ ಮುಂದುವರಿಸಿರುವ ಅಂಗನವಾಡಿ ಕಾರ್ಯಕರ್ತಯರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕೇಳಿಕೊಳ್ಳುತ್ತಿದ್ದಾರೆ. ರಾತ್ರಿ ಫ್ರೀಡಂ ಪಾರ್ಕ್ನಲ್ಲಿ ಮಲಗಿದ್ದ ಅಂಗನವಾಡಿ ಕಾರ್ಯಕರ್ತರು ಅಹೋರಾತ್ರಿ ಧರಣಿ ನಡೆಸಿದ್ದಾರೆ. ಕನಿಷ್ಠ ವೇತನ, ಗ್ರ್ಯಾಚೂಟಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಇಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.