Publish Date: Tue, 04 Dec 2018 (20:30 IST)
Updated Date: Tue, 04 Dec 2018 (20:32 IST)
ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇರೆಗೆ ವ್ಯಕ್ತಿಯೊಬ್ಬನನ್ನು ಬಂಧಿಸಿ, ಲಾರಿ ವಶಕ್ಕೆ ತೆಗೆದುಕೊಳ್ಳಲಾಗಿದೆ.
ಅನ್ನಭಾಗ್ಯ ಅಕ್ಕಿಯನ್ನು ಜಪ್ತಿ ಮಾಡಲಾಗಿದೆ. ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಕಾರ್ಯಚರಣೆ ನಡೆಸಿ ಅನ್ನಭಾಗ್ಯ ಅಕ್ಕಿಯನ್ನು ವಶ ಪಡಿಸಿಕೊಂಡಿದ್ದಾರೆ. ಈ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ನಡೆದಿದೆ.
ಅನ್ನಭಾಗ್ಯ ಅಕ್ಕಿಯನ್ನು ಹಿರಿಯೂರಿನಿಂದ ತುಮಕೂರಿಗೆ ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೋಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಕೂಡಲೇ ಕಾರ್ಯ ಪ್ರವೃತ್ತರಾಗಿ ದಾಳಿ ನಡೆಸಿದ್ದಾರೆ. ಲಾರಿ ಹಾಗೂ 100 ಚೀಲ ಅಕ್ಕಿ ವಶಕ್ಕೆ ಪಡೆದಿದ್ದಾರೆ. ಲಾರಿ ಚಾಲಕ ಯರ್ರಣ್ಣ (36) ಎಂಬಾತನನ್ನು ಬಂಧಿಸಲಾಗಿದೆ. ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.