Daily Horoscope

ಪಿಎಸ್‌ಐ ಅಸಹಜ ಸಾವು ಬೆನ್ನಲ್ಲೇ ಮತ್ತೋರ್ವ ಸಿಸಿಬಿ ಇನ್ಸ್‌ಸ್ಪೆಕ್ಟರ್ ಆತ್ಮಹತ್ಯೆ

Sampriya
ಸೋಮವಾರ, 5 ಆಗಸ್ಟ್ 2024 (15:18 IST)
ಬೆಂಗಳೂರು: ಯಾದಗಿರಿಯಲ್ಲಿ ಪಿಎಸ್‌ಐ ಪರಶುರಾಮ್ ಅಸಹಜ ಸಾವು ಬೆನ್ನಲ್ಲೇ ಇದೀಗ ಪೊಲೀಸ್ ಇಲಾಖೆಯ ಮತ್ತೋರ್ವ ಪೊಲೀಸ್‌ ಇನ್ಸ್‌ಸ್ಪೆಕ್ಟರ್‌ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಸಿಸಿಬಿಯ ಆರ್ಥಿಕ ಅಪರಾಧ ಪತ್ತೆದಳ ವಿಭಾಗದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಆಗಿದ್ದ ತಿಮ್ಮೇಗೌಡ ಅವರು ರಾಮನಗರ ಜಿಲ್ಲೆಯ ಬಿಡದಿಯ ನಿರ್ಜನ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೇಣುಬಿಗಿದ ಸ್ಥಿತಿಯಲ್ಲಿ ಅವರ ಶವ ದೊರೆತಿದೆ.


ತಿಮ್ಮೇಗೌಡ ಅವರು ಒಂದು ತಿಂಗಳ ಹಿಂದೆಷ್ಟೇ ಸಿಸಿಬಿಗೆ ವರ್ಗಾವಣೆಗೊಂಡಿದ್ದರು. ಪ್ರಕರಣ ಸಂಬಂಧ ರಾಮನಗರ ಎಸ್‌ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನೂ ಲೋಕಾಯುಕ್ತದಲ್ಲಿ ತಿಮ್ಮೇಗೌಡ ಅವರ ವಿರುದ್ಧ ಈಚೆಗೆ ಪ್ರಕರಣವೊಂದು ದಾಖಲಾಗಿತ್ತು. ಅದಲ್ಲದೆ
ಅಲ್ಲದೇ ಅತ್ತಿಬೆಲೆಯಲ್ಲಿ ಕರ್ತವ್ಯದಲ್ಲಿದ್ದಾಗ  ತಿಮ್ಮೇಗೌಡ ಅವರು ಅಮಾನತುಗೊಂಡಿದ್ದರು. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಈ ಸಂಬಂಧ ತನಿಖೆ ನಡೆಯುತ್ತಿದೆ. ಬಳಿಕ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments