Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸಮ್ಮಿಶ್ರ ಸರ್ಕಾರದಿಂದ ರೈತರಿಗೆ ಮತ್ತೊಂದು ಸಿಹಿಸುದ್ಧಿ; ಭೂ ಅಭಿವೃದ್ಧಿ ಬ್ಯಾಂಕ್ ಗಳ ಬಡ್ಡಿ ಮನ್ನಾ

ಸಮ್ಮಿಶ್ರ ಸರ್ಕಾರದಿಂದ ರೈತರಿಗೆ ಮತ್ತೊಂದು ಸಿಹಿಸುದ್ಧಿ; ಭೂ ಅಭಿವೃದ್ಧಿ ಬ್ಯಾಂಕ್ ಗಳ ಬಡ್ಡಿ ಮನ್ನಾ
ಬೆಳಗಾವಿ , ಶನಿವಾರ, 15 ಡಿಸೆಂಬರ್ 2018 (07:29 IST)
ಬೆಳಗಾವಿ : ಕೇಂದ್ರ ಸರ್ಕಾರದಿಂದ ರೈತರ ಸಾಲಮನ್ನಾ ವಿಚಾರದಲ್ಲಿ ನಿರಾಸೆಯಾದರೂ, ರಾಜ್ಯ ಸಮ್ಮಿಶ್ರ ಸರ್ಕಾರದಿಂದ ರೈತರಿಗೆ ಮತ್ತೊಂದು ಸಿಹಿಸುದ್ಧಿ ಸಿಕ್ಕಿದೆ.


ಅದೇನೆಂದರೆ ರೈತರು ಭೂ ಅಭಿವೃದ್ಧಿ ಬ್ಯಾಂಕ್ ಗಳಲ್ಲಿ ಪಡೆದಿರುವ ಮಧ್ಯಮಾವಧಿ ಹಾಗೂ ಧೀರ್ಘಾವಧಿ ಸಾಲಗಳ ಬಡ್ಡಿ ಮನ್ನಾ ಮಾಡುವ ಚಿಂತನೆ ನಡೆಸಿರುವುದಾಗಿ ತಿಳಿದುಬಂದಿದೆ.


ಈ ಬಗ್ಗೆ ಮಾತನಾಡಿದ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ಅವರು,’ ರೈತರು ಭೂ ಅಭಿವೃದ್ಧಿ ಬ್ಯಾಂಕ್ ಗಳಲ್ಲಿ ಪಡೆದಿರುವ ಮಧ್ಯಮಾವಧಿ ಹಾಗೂ ಧೀರ್ಘಾವಧಿ ಸಾಲಗಳ ಬಡ್ಡಿ ಮನ್ನಾ ಮಾಡುವ ಚಿಂತನೆ ನಡೆಸಿದೆ. ಈಗಾಗಲೇ ಭೂ ಅಭಿವೃದ್ಧಿ ಬ್ಯಾಂಕ್ ಗಳ ಅಧ್ಯಕ್ಷರು ಹಾಗೂ ನಿರ್ದೇಶಕರು ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಬೇಡಿಕೆ ಸಲ್ಲಿಸಿದ್ದಾರೆ.


ಸಹಕಾರ ಬ್ಯಾಂಕ್ ಗಳಲ್ಲಿ ರೈತರು ಪಡೆದ ಸಾಲದ ಪೈಕಿ ಹಿಂದಿನ ಸರ್ಕಾರ 5 ಸಾವಿರ ಕೋಟಿ ರೂ. ಬಿಡುಗಡೆ ಮಾಡಿತ್ತು. ಸಮ್ಮಿಶ್ರ ಸರ್ಕಾರ 1,322 ಕೋಟಿ ರೂ. ಮಂಜೂರು ಮಾಡಿದೆ. 800 ಕೋಟಿಯನ್ನು ಈಗಾಗಲೇ ಅಪೆಕ್ಸ್ ಬ್ಯಾಂಕ್ ಖಾತೆಗೆ ಬಿಡುಗಡೆ ಮಾಡಿದ್ದೇವೆ. ಇನ್ನುಳಿದ ಮೊತ್ತವನ್ನೂ ವರ್ಷದ ಒಳಗಡೆ ಬಿಡುಗಡೆ ಮಾಡುತ್ತೇವೆ. ಋಣಮುಕ್ತ ಪತ್ರ ನೀಡುತ್ತೇವೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಹಿಳೆಯರೇ ಫೇಸ್ ಬುಕ್ ನಲ್ಲಿ ಪರಿಚಯವಿಲ್ಲದವರನ್ನು ಫ್ರೆಂಡ್ ಮಾಡಿಕೊಳ್ಳುವ ಮುನ್ನ ಎಚ್ಚರ