Publish Date: Sat, 03 Aug 2019 (11:50 IST)
Updated Date: Sat, 03 Aug 2019 (11:52 IST)
ಬೆಂಗಳೂರು : ಕಾಂಗ್ರೆಸ್ ನಿಂದ ಅನರ್ಹಗೊಂಡ ಶಾಸಕರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಿರುವುದು ಇದೀಗ ರಾಜಕೀಯ ವಲಯದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಹೌದು. ಇಂದು ಶಾಸಕ ಡಾ.ಕೆ ಸುಧಾಕರ್ ಅವರು ಸಿಎಂ ಯಡಿಯೂರಪ್ಪ ನಿವಾಸಕ್ಕೆ ಭೇಟಿ ಮಾತುಕತೆ ನಡೆಸಿದ ನಂತರ ಇದೀಗ ಮತ್ತೊಬ್ಬ ಅನರ್ಹ ಶಾಸಕ ರೋಷನ್ ಬೇಗ್ ಅವರು ಭೇಟಿ ನೀಡಿ ತನನ್ನು ಕಾಪಾಡಿ ಎಂದು ಸಿಎಂ ಬಳಿ ಮನವಿ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.
ನಿಮಗಾಗಿ ಶಿವಾಜಿನಗರ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮ ಕೊಟ್ಟಿದ್ದೇನೆ. ಇದೀಗ ಪದೇ ಪದೇ ವಿಚಾರಣೆಗೆ ಕರೆದು ಮಾನಸಿಕ ಹಿಂಸೆ ಕೊಡುತ್ತಿದ್ದಾರೆ. ಹೀಗಾಗಿ ಹೇಗಾದರೂ ಮಾಡಿ ಎಸ್ ಐಟಿ ಖೆಡ್ಡಾದಿಂದ ನನ್ನನ್ನು ನೀವೇ ಪಾರು ಮಾಡಬೇಕು ಎಂದು ಬೇಗ್ ಸಿಎಂ ಜೊತೆ ತಮ್ಮ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.