ಹಿರಿಯ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಪ್ರಕರಣವನ್ನು ಉತ್ತರಪ್ರದೇಶ ಸರಕಾರ ಸಿಬಿಐಗೆ ವಹಿಸಲಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಅನುರಾಗ್ ತಿವಾರಿ ಹೇಗೆ ಮೃತಪಟ್ಟಿದ್ದಾರೆ ಎನ್ನುವುದೇ ಗೊತ್ತಿಲ್ಲ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಕರಣವನ್ನು ಎಸ್‌ಐಟಿಗೆ ವಹಿಸಿದ್ದಾರೆ. ತನಿಖೆಯ ನಂತರ ಸತ್ಯಾಸತ್ಯತೆ ಹೊರಬರಲಿದೆ ಎಂದು ತಿಳಿಸಿದ್ದಾರೆ.
ದಕ್ಷ ಅಧಿಕಾರಿ ಡಿ.ಕೆ.ರವಿ ಪ್ರಕರಣದಲ್ಲೂ ಅನುಮಾನವಿದೆ ಎನ್ನುವ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ನಮ್ಮ ಸರಕಾರ ಸಿಬಿಐಗೆ ಒಪ್ಪಿಸಿತ್ತು. ಸಿಎಂ ಸಿದ್ದರಾಮಯ್ಯ ಈಗಾಗಲೇ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಚುನಾವಣೆ ಬಂದಾಗ ಬಿಜೆಪಿ ನಾಯಕರಿಗೆ ದಲಿತರ ನೆನಪಾಗಲಿಲ್ಲವೇ? ದಲಿತರ ಮನೆಗೆ ತೆರಳಿ ಹೋಟೆಲ್‌ನಿಂದ ಉಪಹಾರ ತರಿಸಿಕೊಂಡು ತಿನ್ನುವುದರಿಂದ ಕೆಟ್ಟ ಸಂದೇಶ ರವಾನಿಸಿದಂತಾಗುವದಿಲ್ಲವೇ. ಗುಡ್, ಬ್ಯಾಡ್ ಎನ್ನುವುದನ್ನು ಜನತೆ ತೀರ್ಮಾನಿಸುತ್ತಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಟಾಂಗ್ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.