Publish Date: Tue, 02 Jun 2020 (20:38 IST)
Updated Date: Tue, 02 Jun 2020 (20:40 IST)
ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ ಮಾಡಲಾಗಿದೆ.
ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದಿಂದ 2019-20ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಕಲಬುರಗಿ ಜಿಲ್ಲೆಯ ಸಫಾಯಿ ಕರ್ಮಚಾರಿ, ಮ್ಯಾನ್ಯುಯಲ್ ಸ್ಕಾವೆಂಜರ್ ಮತ್ತು ಅವರ ಅವಲಂಬಿತರಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಅವಧಿಯನ್ನು ಜೂನ್ 30 ರವರೆಗೆ ವಿಸ್ತರಿಸಲಾಗಿದೆ.
ಅರ್ಹ ಫಲಾನುಭವಿಗಳು ಸ್ವಯಂ ಉದ್ಯೋಗ ಯೋಜನೆ (ಐ.ಎಸ್.ಬಿ.), ಸಮೃದ್ದಿ ಯೋಜನೆ, ಉನ್ನತಿ ಯೋಜನೆ, ಐರಾವತ ಯೋಜನೆ, ಪ್ರೇರಣ ಯೋಜನೆ, ಸ್ಫೂರ್ತಿ ಯೋಜನೆ, ಗಂಗಾ ಕಲ್ಯಾಣ ಹಾಗೂ ಭೂ ಒಡೆತನ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳು ನಿಗಮದ ಯೋಜನೆಗಳ ಅನುಷ್ಟಾನ, ಸರ್ಕಾರದ ಮಾರ್ಗಸೂಚಿ ಮತ್ತು ಯೋಜನೆಗಳ ಮತ್ತಿತರ ವಿವರಗಳನ್ನು ನಿಗಮದ ವೆಬ್‍ಸೈಟ್‍ದಿಂದ ಪಡೆಯಬಹುದಾಗಿದೆ.