ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಸಮ್ಮತಿ ನೀಡಲಾಗಿದೆ.
ವಿಧಾನಪರಿಷತ್ ಸಭಾಪತಿ ಡಿ.ಎಚ್.ಶಂಕರ್‌ಮೂರ್ತಿ, ಅವಿಶ್ವಾಸ ನಿರ್ಣಯ ಬೆಂಬಲಿಸುವವರು ಎದ್ದು ನಿಲ್ಲಿ ಎಂದಾಗ ಜಿ.ಪರಮೇಶ್ವರ್, ಐವಾನ್ ಡಿಸೋಜಾ ಸೇರಿದಂತೆ 10 ಕ್ಕೂ ಹೆಚ್ಚು ಶಾಸಕರು ಎದ್ದು ನಿಂತಿದ್ದರಿಂದ ಅವಿಶ್ವಾಸ ನಿರ್ಣಯಕ್ಕೆ ಬೆಂಬಲ ದೊರೆತಂತಾಗಿದೆ.
ಅವಿಶ್ವಾಸ ನಿರ್ಣಯಕ್ಕೆ ಸದನದಲ್ಲಿ ಬೆಂಬಲ ದೊರೆತ ನಂತರ ನಾಲ್ಕು ಅಥವಾ ಐದು ದಿನಗಳೊಳಗಾಗಿ ಮತದಾನಕ್ಕೆ ಹಾಕಬೇಕಾಗುತ್ತದೆ ಎಂದು ಸದನದ ಮೂಲಗಳು ತಿಳಿಸಿವೆ.
ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಯಲ್ಲಿ ಜಯಗಳಿಸಬೇಕಾದಲ್ಲಿ ಜೆಡಿಎಸ್ ಶಾಸಕರ ಬೆಂಬಲ ಅಗತ್ಯವಾಗಿದೆ. ಆದ್ದರಿಂದ, ಇಂದು ಸಂಜೆ ಕುಮಾರಸ್ವಾಮಿಯವರೊಂದಿಗೆ ಕಾಂಗ್ರೆಸ್ ಪಕ್ಷದ ನಾಯಕರು ಚರ್ಚೆ ನಡೆಸಲಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ತಿಳಿಸಿದ್ದಾರೆ.
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
http://kannada.fantasycricket.webdunia.com/
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.