ಕೈ ಕೊಟ್ಟ ಆರಿದ್ರಾ ಮಳೆ: ದನಗಳ ಪಾಲಾಯ್ತು ಬೆಳೆ

Webdunia
ಸೋಮವಾರ, 16 ಜುಲೈ 2018 (11:30 IST)
ರಾಜ್ಯಾದ್ಯಂತ ವರುಣನ ಆರ್ಭಟ ಜೊರಾಗಿದೆ. ಆದರೆ ನಿಗದಿತ ಸಮಯದಲ್ಲಿ ಬಾರದೇ ರೈತನ ಜೀವನದಲ್ಲಿ ಚೆಲ್ಲಾಟವಾಡುತ್ತಿದೆ. ಮುಂಗಾರಿನಲ್ಲಿ ಬಿತ್ತನೆ ಮಾಡಿದ್ದ ಹೆಸರು, ಅಲಸಂದೆ, ಉದ್ದು, ಎಳ್ಳು, ತೊಗರಿ ಈಗ ದನಕರುಗಳ ಪಾಲಾಗಿವೆ.

ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನಲ್ಲಿ ಆರಿದ್ರಾ ಮಳೆ ಕೈ ಕೊಟ್ಟ ಪರಿಣಾಮ ಕಾಯಿಕಚ್ಚುವ ಹಂತದಲ್ಲಿದ್ದ ಮುಂಗಾರು ಬೆಳೆಗಳು ನಷ್ಟವಾಗಿದೆ. ಅಶ್ವಿನಿ ಭರಣಿ ಮಳೆ ಚೆನ್ನಾಗಿ ಸುರಿದಿದ್ರಿಂದ ಸಂತೋಷಗೊಂಡ ರೈತರು, ಹೆಸರು, ಅಲಸಂದೆ, ಉದ್ದು, ಎಳ್ಳು ಬಿತ್ತನೆ ಮಾಡಿದ್ದರು. ಕಾಲಕಾಲಕ್ಕೆ ಮಳೆಯಾಗಿದ್ರಿಂದ  ಹಚ್ಚಹಸಿರಾಗಿ ಬೆಳೆ ಬಂದಿತ್ತು. ಕಾಳುಗಟ್ಟುವ ಸಮಯದಲ್ಲಿ ಆರಿದ್ರಾ ಮಳೆ ಕೈಕೊಟ್ಟಿದ್ರಿಂದ ಬೆಳೆ ಸಂಪೂರ್ಣ ಹಾಳಾಗಿದೆ.

ರೈತರು ದನ ಕರುಗಳನ್ನ ಕಟ್ಟಿ ಮೇಯಿಸುತ್ತಿದ್ದಾರೆ. ಕಳೆದ ವರ್ಷವೂ ಸಹ ಆರಿದ್ರಾ ಮಳೆ ಕೈಕೊಟ್ಟು ಸಾವಿರಾರು ಎಕರೆ ಮುಂಗಾರು ಬೆಳೆ ನಷ್ಟವಾಗಿತ್ತು. ವರ್ಷವೂ ಸಹ ಬೆಳೆ ಹಾಳಾಗಿದ್ರಿಂದ ಸಾವಿರಾರು ರೂಪಾಯಿ ಖರ್ಚು ಮಾಡಿ ಜಮೀನು ಹದ ಮಾಡಿ ಗೊಬ್ಬರ ಹಾಕಿ ಬೀಜ ಬಿತ್ತನೆ ಮಾಡಿದ ರೈತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ. ಕಳೆದ ವರ್ಷದ ಬೆಳೆ ನಷ್ಟದಿಂದಾದ ಫಸಲ್ ಬೀಮಾ ಯೋಜನೆಯಡಿ ಪರಿಹಾರ ಇನ್ನೂ ಸಿಕ್ಕಿಲ್ಲ. ವರ್ಷವೂ ಬೆಳೆ ನಷ್ಟವಾಗಿದ್ದು ಭಾಗದ ರೈತರು ಮತ್ತಷ್ಟು ಕಂಗಾಲಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಜಿ ಕೇಂದ್ರ ಸಚಿವರ ಮಗಳೊಬ್ಬಳ ಎಂತಹ ದರ್ಪ: ಕರ್ತವ್ಯದಲ್ಲಿದ್ದ ಬ್ಯಾಂಕ್ ಮ್ಯಾನೇಜರ್ ಮೇಲೆ ಹೀಗೇ ನಡೆದುಕೊಳ್ಳುವುದಾ, Video

ಎಲ್ಲರೂ ಇಷ್ಟು ಒಳ್ಳೇವ್ರು ಆಗಿರಲ್ಲ... ನೆನೆಯುತ್ತಿದ್ದ ಶಾಲಾ ಬಾಲಕಿ ನೋಡಿ ಅಧಿಕಾರಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Video

ಯಾಕೋ ಮೊದಲೇ ಹೇಳಿಲ್ಲ.. ರೋಗಿ ಮಾಡಿದ ಕೆಲಸಕ್ಕೆ ಪಿತ್ತ ನೆತ್ತಿಗೇರಿ ವೈದ್ಯರೊಬ್ಬರು ಮಾಡಿದ್ದೇನು ಗೊತ್ತಾ Video

ಪಾಕ್‌ನ ಪ್ರತಿಯೊಂದು ದುಸ್ಸಾಹಸಕ್ಕೂ, ಊಹಿಸದ ರೀತಿಯಲ್ಲಿ ಉತ್ತರ ನೀಡುತ್ತೇವೆ

Bidar: ಆಸ್ಪತ್ರೆ ಒಳಗೇ ಬೈಕ್ ನುಗ್ಗಿಸಿದ್ದ ಅಸಾಮಿ: ಪೊಲೀಸರಿಂದ ಬಿತ್ತು ಹಿಗ್ಗಾ ಮುಗ್ಗಾ ಗೂಸಾ video

ಮುಂದಿನ ಸುದ್ದಿ
Show comments