ಮುಂಬೈ : 48 ವರ್ಷದ ವೈದ್ಯನೊಬ್ಬ ಮೂವರು ವ್ಯಕ್ತಿಗಳ ಜೊತೆ ಸೇರಿ ಮಗುವನ್ನು ಮಾರಾಟ ಮಾಡಿದ ಘಟನೆ ಮಹಾರಾಷ್ಟ್ರದ ಮುಂಬೈನ ವಿರಾರ್ ಪ್ರದೇಶದಲ್ಲಿ ನಡೆದಿದೆ.
ವೈದ್ಯ ಮಗುವನ್ನು ಮಕ್ಕಳಿಲ್ಲದ ದಂಪತಿಗಳಿಗೆ 5 ಲಕ್ಷಕ್ಕೆ ಮಾರಾಟ ಮಾಡಿದ್ದಾನೆ. ಆದರೆ ಮಗುವನ್ನು ಸಾಗಿಸುತ್ತಿದ್ದ ವೇಳೆ ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ವಾಹನದ ಮೇಲೆ ದಾಳಿ ನಡೆಸಿ ಮಗುವನ್ನು ರಕ್ಷಿಸಿದ್ದಾರೆ ಮತ್ತು ಇದಕ್ಕೆ ಸಂಬಂಧಪಟ್ಟ ಆರೋಪಿಗಳನ್ನು ಬಂಧಿಸಿದ್ದಾರೆ.