Publish Date: Mon, 28 Nov 2022 (16:46 IST)
Updated Date: Mon, 28 Nov 2022 (16:48 IST)
ರೌಡಿಶೀಟರ್ ಮೇಲೆ ಕಲ್ಲಿನಿಂದ ದಾಳಿ ನಡೆದು ಸಾವನ್ನಪ್ಪಿರುವ ಘಟನೆ ಭಾನುವಾರ ಮಂಡ್ಯ ಜಿಲ್ಲೆಯ ಕೆ.ಎಂ ದೊಡ್ಡಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ರೌಡಿ ಶೀಟರ್ ಅರುಣ್ ಅಲಿಯಾಸ್ ಕಪ್ಪೆ ಎಂಬ ವ್ಯಕ್ತಿ ಮೃತ ದುರ್ದೈವಿ. ಕನ್ನಡ ರಾಜ್ಯೋತ್ಸವದ ವೇಳೆ ಸ್ಥಳೀಯ ಶಾಸಕ ಡಿ.ಸಿ ತಮ್ಮಣ್ಣರ ಫೋಟೊ ಹಾಕದೆ ಇರೋದನ್ನ ಪ್ರಶ್ನಿಸಿದ್ದ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಜಗಳವಾಗಿತ್ತು. ಆರೋಪಿಗಳಾದ ದೊಡ್ಡಯ್ಯ, ದೇವರಾಜ್, ಅಭಿ, ಗಜ, ಬೆಲ್ಲ ರಾಘು, ಎಂಬುವವರು ಅರುಣ್ ಮೇಲೆ ದೊಣ್ಣೆ ಕಲ್ಲಿನಿಂದ ದಾಳಿ ನಡೆಸಿದ್ದರು. ಇದರಿಂದ ತೀವ್ರ ಹಲ್ಲೆಗೊಳಗಾಗಿದ್ದ ಅರುಣ್ ನನ್ನು ಆಸ್ಪತ್ರೆಗೆ ಕೊಂಡೊಯ್ಯುವ ವೇಳೆ ಆರೋಪಿಗಳು ಮತ್ತೆ ದಾಳಿ ನಡೆಸಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಅರುಣ್ ಸಾವನ್ನಪ್ಪಿದ್ದಾನೆ. ಕೆ.ಎಂ ದೊಡ್ಡಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು,ಸದ್ಯ ಪೋಲೀಸರು ಈ ಪ್ರಕರಣ ಸಂಬಂಧ 7 ಮಂದಿ ಆರೋಪಿಗಳನ್ನು ಪೊಲಿಸರು ಬಂಧಿಸಿದ್ದಾರೆ.