Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಶುಗರ್ ಹೆಚ್ಚಿಸಿಕೊಳ್ಳಲು ಮಾವು, ಸಿಹಿ ತಿನಿಸು ಸೇವಿಸುತ್ತಿರುವ ಅರವಿಂದ್ ಕೇಜ್ರಿವಾಲ್: ಇಡಿ ಆರೋಪ

Aravindh

Sampriya

ನವದೆಹಲಿ , ಗುರುವಾರ, 18 ಏಪ್ರಿಲ್ 2024 (16:39 IST)
ನವದೆಹಲಿ: ವೈದ್ಯಕೀಯ ಜಾಮೀನು ಪಡೆಯುವ ಉದ್ದೇಶದಿಂದ ಜೈಲಿನಲ್ಲಿರುವ ಅರವಿಂದ್ ಕೇಜ್ರಿವಾಲ್‌ಗೆ ಪ್ರತಿದಿನ ಸಕ್ಕರೆ ಅಂಶವಿರುವ ಮಾವಿನಹಣ್ಣು, ಆಲೂ ಪೂರಿ ಹಾಗೂ ಸಿಹಿ ತಿಂಡಿಗಳನ್ನು ಸೇವಿಸುತ್ತಿದ್ದಾರೆ ಎಂದು ಇಡಿ ಆರೋಪ ಮಾಡಿದೆ.

ಅರವಿಂದ್ ಕೇಜ್ರಿವಾಲ್ ಅವರಿಗೆ ಸಕ್ಕರೆ ಖಾಯಿಲೆ ಇದ್ದರು ಅವರು ಉದ್ದೇಶಪೂರ್ವಕವಾಗಿ ಮಾವು, ಸಿಹಿ ತಿನಿಸುಗಳನ್ನು ಯಥೇಚ್ಚವಾಗಿ ಸೇವಿಸುತ್ತಿದ್ದಾರೆ. ಇಷ್ಟು ದಿನ ಸಕ್ಕರೆ ರಹಿತ ಚಹಾ ಸೇವಿಸುತ್ತಿದ್ದ ಕೇಜ್ರಿವಾಲ್ ಈಗ ಸಕ್ಕರೆ ಸಹಿತ ಚಹಾ ಕುಡಿಯುತ್ತಿದ್ದಾರೆ. ಇದರಿಂದ ತಮ್ಮ ದೇಹದಲ್ಲಿನ ರಕ್ತದ ಸಕ್ಕರೆ ಪ್ರಮಾಣವನ್ನು ಹೆಚ್ಚಿಸಿಕೊಂಡು ವೈದ್ಯಕೀಯ ಪರಿಸ್ಥಿತಿ ಆಧಾರದಲ್ಲಿ ಜಾಮೀನು ಪಡೆಯುವ ಉದ್ದೇಶ ಅವರದ್ದಾಗಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೆಹಲಿ ಕೋರ್ಟ್ ಗೆ ಗುರುವಾರ ಮಾಹಿತಿ ನೀಡಿದ್ದಾರೆ.

ಕೇಜ್ರಿವಾಲ್ ತಮ್ಮ ಸಕ್ಕರೆ ಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಲು ಮತ್ತು ವೀಡಿಯೊ ಕಾನ್ಫರೆನ್ಸ್ ಮೂಲಕ ತಮ್ಮ ನಿಯಮಿತ ವೈದ್ಯರೊಂದಿಗೆ ಸಮಾಲೋಚಿಸಲು ಕೇಜ್ರಿವಾಲ್ ಮಾಡಿದ ಮನವಿಗೆ ಪ್ರತಿಕ್ರಿಯೆಯಾಗಿ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರ ಮುಂದೆ ಇಡಿ ವಕೀಲ ಜೊಹೆಬ್ ಹೊಸೈನ್ ಅವರು ವಾದ ಮಂಡಿಸಿದ್ದಾರೆ.

ಇಡಿ ಹಾಗೂ ಸಿಬಿಐ ಪ್ರಕರಣಗಳ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರ ಎದುರು ಇ.ಡಿ ವಾದ ಮಂಡಿಸಿದೆ.

ನಾಳೆಯೊಳಗೆ ವರದಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನ್ಯಾಯಾಧೀಶರು ಸೂಚಿಸಿದ್ದು, ನ್ಯಾಯಾಲಯವು ಮತ್ತೆ ವಿಚಾರಣೆ ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

ದೆಹಲಿ ಸರ್ಕಾರದ ಅಬಕಾರಿ ನೀತಿ ಹಗರಣದಲ್ಲಿನ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಇಲ್ಲಿನ ನ್ಯಾಯಾಲಯವು ಏಪ್ರಿಲ್‌ 23ರ ವರೆಗೆ ವಿಸ್ತರಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಪಾರ್ಟ್‌ಮೆಂಟ್‌ನಲ್ಲಿ ಬೆದರಿಕೆ ಹಾಕಿ ಮತಯಾಚನೆ: ಡಿಕೆಶಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು