Webdunia - Bharat's app for daily news and videos

Install App

ಆಶಾ ಗುಣಗಾನ ಮಾಡಿದ ರಾಜ್ಯ ಸಚಿವ

Webdunia
ಶುಕ್ರವಾರ, 26 ಜೂನ್ 2020 (20:26 IST)
ಕೋವಿಡ್-19 ಸೋಂಕು ನಿಯಂತ್ರಣಲ್ಲಿದ್ದರೆ,  ಇದಕ್ಕೆ ಆಶಾ ಕಾರ್ಯಕರ್ತೆಯರೇ ಕಾರಣ ಎಂದು ಸಚಿವರೊಬ್ಬರು ಹೇಳಿದ್ದಾರೆ.

ಆಶಾ ಕಾರ್ಯಕರ್ತೆಯರು ಸರ್ಕಾರದ ಜೊತೆ ಕೈಜೋಡಿಸುವ ಮೂಲಕ ಕೋವಿಡ್-19 ಹತೋಟಿಗೆ ಶ್ರಮಿಸುತ್ತಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್,  ಆಶಾ ಕಾರ್ಯಕರ್ತರ ಬಗ್ಗೆ ಗುಣಗಾನ ಮಾಡಿದ್ದಾರೆ.

 ಕಲಬುರಗಿ ನಗರದ ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಸಹಕಾರ ಇಲಾಖೆ, ಸಹಕಾರ ಸಂಘಗಳು ಹಾಗೂ ಸಂಘ, ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಕಲಬುರಗಿ ಜಿಲ್ಲೆಯ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಚೆಕ್ ವಿತರಣಾ ಸಮಾರಂಭದಲ್ಲಿ ಚೆಕ್ ವಿತರಿಸಿ ಮಾತನಾಡಿದರು.

ಜಿಲ್ಲಾಡಳಿತ, ಪೊಲೀಸ್ ಇಲಾಖೆ, ವೈದ್ಯರು, ನರ್ಸ್‍ಗಳು ಮುಂತಾದವರು ಕೋವಿಡ್-19 ನಿಯಂತ್ರಣಕ್ಕಾಗಿ ಶ್ರಮಿಸುತ್ತಿದ್ದಾರೆ. ಈ ಪೈಕಿ ಆಶಾ ಕಾರ್ಯಕರ್ತೆಯರ ಪಾತ್ರ ಮಹತ್ವವಾದುದು. ತಮ್ಮ ಜೀವದ ಹಂಗು ತೊರೆದು 24 ಗಂಟೆಗಳ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆಯ ಮಾತುಗಳನ್ನಾಡಿದರು.

ರಾಜ್ಯದ 17 ಜಿಲ್ಲೆಗಳಲ್ಲಿ ಈಗಾಗಲೇ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನದ ಚೆಕ್ ನೀಡಲಾಗಿದ್ದು, ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ 42,680 ಆಶಾ ಕಾರ್ಯಕರ್ತೆಯರಿಗೆ ತಲಾ ರೂ.3 ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಒಟ್ಟು ರೂ.18 ಕೋಟಿ 7ವರೆ ಲಕ್ಷ ರೂಪಾಯಿ ಖರ್ಚು ಮಾಡಲಾಗುತ್ತದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments