Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ತಮ್ಮ ವಿವಿಧ ಬೇಡಿಕೆಗಳನ್ನು ಕೂಡಲೆ ಈಡೇರಿಸಬೇಕೆಂದು ಒತ್ತಾಯಿಸಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಸೋಮವಾರ ಮಹಾನಗರ ಪಾಲಿಕೆ ಕೇಂದ್ರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.ಆಶಾ ಕಾರ್ಯಕರ್ತೆಯರು ಕಳೆದ ಒಂದೂವರೆ ವರ್ಷದಿಂದ ಕೊರೋನಾ ಸಾಂಕ್ರಾಮಿಕ ಹರಡುವಿಕೆಯನ್ನು ತಡೆಗಟ್ಟುವಲ್ಲಿ ತಮ್ಮ ಜೀವದ ಹಂಗು ತೊರೆದು, ಕೊರೋನಾ ವಾರಿಯರ್ಸ್ ಆಗಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದ್ದಾರೆ.
ಇದರ ಜೊತೆಗೆ ಮೂಲ ಕೆಲಸಗಳಾದ ಸುಗಮ ಹೆರಿಗೆ, ಸ್ವಸ್ಥ ಮಗುವಿನ ಜನನ, ತಾಯಿ-ಶಿಶು ಹಾರೈಕೆಗಳ ಕುರಿತ ಸೇವೆಗಳು, ಗ್ರಾಮ ನೈರ್ಮಲ್ಯ ಸೇರಿದಂತೆ ವಿವಿಧ ಕಾರ್ಯ ಚಟುವಟಿಕೆಗಳನ್ನೂ ಸಹ ಮಾಡಬೇಕಾಗಿದೆ.
ಈ ಕೆಳಗಿನ ಸಮಸ್ಯೆಗಳಿಗೆ ಕೂಡಲೇ ಸೂಕ್ತ ಕ್ರಮಕೈಗೊಳ್ಳಬೇಕೆಂದು ಪ್ರತಿಭಟನೆ ಮೂಲಕ ಮನವಿ ಮಾಡಲಾಗಿದೆ.