Webdunia - Bharat's app for daily news and videos

Install App

ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಅಶ್ವತ್ಥಾಮ ಆನೆ ಸಾವು

Sampriya
ಮಂಗಳವಾರ, 11 ಜೂನ್ 2024 (16:23 IST)
Photo Courtesy X
ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರೆಯಲ್ಲಿ ಎರಡು ಬಾರಿ ಪಾಲ್ಗೊಂಡಿದ್ದ ಅಶ್ವತ್ಥಾಮ ಹೆಸರಿನ 38 ವರ್ಷದ ಆನೆಯು ಸೋಲಾರ್ ಬೇಲಿಯ ವಿದ್ಯುತ್ ಪ್ರವಹಿಸಿ ಮಂಗಳವಾರ ಮೃತಪಟ್ಟಿದೆ.

ಮೈಸೂರು ಜಿಲ್ಲೆಯ ಹುಣಸೂರು- ಪಿರಿಯಾಪಟ್ಟಣ ತಾಲ್ಲೂಕಿನ ಗಡಿ ಭಾಗದ ನಾಗರಹೊಳೆ ಹುಲಿಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಆನೆಯು ಮೇವಿಗೆ ಕಾಡಿಗೆ ತೆರಳಿತ್ತು.

ಸೋಲಾರ್ ಬೇಲಿ ಮೇಲೆ ವಿದ್ಯುತ್ ತಂತಿಯು ಬಿದ್ದಿದ್ದರಿಂದ ವಿದ್ಯುತ್ ಆಘಾತದಿಂದ ಅಶ್ವತ್ಥಾಮ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ‌ ಮೂಲಗಳು ತಿಳಿಸಿವೆ.

2017ರಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ಅಶ್ವತ್ಥಾಮನನ್ನು ಸೆರೆ ಹಿಡಿಯಲಾಗಿತ್ತು. ಶಾಂತ ಹಾಗೂ ಗಾಂಭೀರ್ಯ ಸ್ವಭಾವಕ್ಕೆ ಹೆಸರಾಗಿದ್ದ ಅದನ್ನು ನಾಲ್ಕು ವರ್ಷದಲ್ಲಿಯೇ 2021ರ ದಸರೆಗೆ ಕರೆತರಲಾಗಿತ್ತು. ಅದಕ್ಕೆ ನಡಿಗೆ ತಾಲೀಮು ಸೇರಿದಂತೆ ವಿವಿಧ ತಾಲೀಮನ್ನು ನೀಡಲಾಗಿತ್ತು.‌

2022ರ ದಸರೆಯಲ್ಲಿ ಅಶ್ವತ್ಥಾಮ ಪಾಲ್ಗೊಂಡು ಗಮನ ಸೆಳೆದಿತ್ತು. ಆದರೆ, ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಿರಲಿಲ್ಲ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments