Webdunia - Bharat's app for daily news and videos

Install App

ಎಷ್ಟಾದರೂ ಹಣ-ಸವಲತ್ತು ಕೇಳಿ ಕೊಡ್ತೀನಿ, ಆದರೆ ಒಲಿಂಪಿಕ್ ಮೆಡಲ್ ತನ್ನಿ: ಸಿಎಂ ಕರೆ

Sampriya
ಶುಕ್ರವಾರ, 17 ಜನವರಿ 2025 (19:47 IST)
ಮಂಗಳೂರು: ಕ್ರೀಡಾಪಟುಗಳು, ಕೋಚ್ ಗಳು ಮತ್ತು ಕ್ರೀಡಾ ಇಲಾಖೆ ಎಷ್ಟಾದರೂ ಹಣ-ಸವಲತ್ತು ಕೇಳಿ. ನಾನು ಕೊಡ್ತೀನಿ. ಆದರೆ ಒಲಂಪಿಕ್ ನಲ್ಲಿ ರಾಜ್ಯದ ಪಟುಗಳು ದೇಶಕ್ಕಾಗಿ ಮೆಡಲ್ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.‌

ಯುವಜನ ಮತ್ತು ಕ್ರೀಡಾ ಇಲಾಖೆ ಮತ್ತು ಜಿಲ್ಲಾಡಳಿತ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ "ಕರ್ನಾಟಕ ಕ್ರೀಡಾಕೂಟ 2025 ನ್ನು ಉದ್ಘಾಟಿಸಿ ಮಾತನಾಡಿದರು.  

ಅಗತ್ಯ ವೇದಿಕೆ ಮತ್ತು ಉತ್ತಮ ಪ್ರೋತ್ಸಾಹ ಇಲ್ಲದಿದ್ದರೆ ಕ್ರೀಡಾ ಕ್ಷೇತ್ರ ಮತ್ತು ಕ್ರೀಡಾಪಟುಗಳು ಬೆಳವಣಿಗೆ ಆಗಲು ಸಾಧ್ಯವಿಲ್ಲ. ಆದ್ದರಿಂದ ನಮ್ಮ ಸರ್ಕಾರ

ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಹಾಜರಾತಿ ಸೇರಿ ಇನ್ನಿತರೆ ರಿಯಾಯ್ತಿಗಳನ್ನು ಕೊಡುವ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಪುನರುಚ್ಚರಿಸಿದರು.

ಮುಂದಿನ ಬಜೆಟ್ ನಲ್ಲಿ ಮಂಗಳೂರು ಮತ್ತು ಉಡುಪಿ ಕ್ರೀಡಾಂಗಣಗಳ ಉನ್ನತೀಕರಣಕ್ಕೆ ತಲಾ 3 ಕೋಟಿ ರೂಪಾಯಿ ನಿಗಧಿ ಮಾಡ್ತೀನಿ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಘೋಷಿಸಿದರು.

ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಾಗ ಶೇ2 ರಷ್ಟು ಉದ್ಯೋಗಗಳು ಕ್ರೀಡಾಟುಗಳಿಗೆ ಮೀಸಲು ಇಡಲಾಗುವುದು. ಜೊತೆಗೆ ಪೊಲೀಸ್, ಅರಣ್ಯ ಇಲಾಖೆ ಸೇರಿ ಸಮವಸ್ತ್ರ ಧರಿಸುವ ಹುದ್ದೆಗಳಿಗೆ ಶೇ3 ರಷ್ಟು ಉದ್ಯೋಗ ಕ್ರೀಡಾಪಟುಗಳಿಗೆ ಉದ್ಯೋಗ ಮೀಸಲು ಇಡಲಾಗುವುದು ಎಂದು ಸಿಎಂ ಘೋಷಿಸಿದರು.

ಒಲಂಪಿಕ್ ನಲ್ಲಿ ಮೆಡಲ್ ತಂದವರಿಗೆ 6 ಕೋಟಿ ರೂಪಾಯಿ ಕೊಡ್ತೀವಿ. ಹಾಗೆಯೇ ಏಷ್ಯಾ ಕ್ರೀಡಾಕೂಟ ಮತ್ತು ರಾಷ್ಟ್ರಮಟ್ಟದಲ್ಲಿ ಪದಕ ತಂದವರಿಗೂ ನಗದು ಬಹುಮಾನ ಕೊಡುತ್ತಿದ್ದೇವೆ. ಈ ಪ್ರೋತ್ಸಾಹ ಸದುಪಯೋಗಪಡಿಸಿಕೊಂಡು ಮೆಡಲ್ ಗಳನ್ನು ತಂದು ಕ್ರೀಡಾಕ್ಷೇತ್ರವನ್ನು ಬೆಳಗಿಸಿ, ಬೆಳೆಸಿ ಎಂದು ಕರೆ ನೀಡಿದರು.

ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್, ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಕೆ.ಗೋವಿಂದರಾಜು, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ‌ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಐವನ್ ಡಿಸೋಜಾ, ಮಾಜಿ ಸಚಿವ ರಮಾನಾಥ ರೈ ಸೇರಿ ಜಿಲ್ಲೆಯ ಶಾಸಕರುಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments