ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆ ರಣತಂತ್ರ ಕುರಿತಂತೆ ಚರ್ಚಿಸಲು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನಿವಾಸದಲ್ಲಿ ರಾಜ್ಯದ ಮುಖಂಡರ ಸಭೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಸಭೆಯಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರರೂಢವಾಗಿರುವ ಕಾಂಗ್ರೆಸ್ ಪಕ್ಷ, ಮತ್ತೊಂದು ಪ್ರಾದೇಶಿಕ ಪಕ್ಷವಾದ ಜೆಡಿಎಸ್ನ್ನು ಯಾವ ರೀತಿ ಎದುರಿಸಬೇಕು ಎನ್ನುವ ಬಗ್ಗೆ ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟ, ರಣತಂತ್ರಗಳನ್ನು ರೂಪಿಸಿ ಮುಂಬರುವ ಚುನಾವಣೆಯಲ್ಲಿ ಜಯಗಳಿಸಿ ಅಧಿಕಾರಕ್ಕೆ ಬರಲೇಬೇಕು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಫರ್ಮಾನ್ ಹೊರಡಿಸಿದ್ದಾರೆ.
ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಸಂಸದ ಪ್ರಹ್ಲಾದ್ ಜೋಷಿ, ಗೋವಿಂದ ಕಾರಜೋಳ, ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರ್ ರಾವ್, ಅರವಿಂದ್ ಲಿಂಬಾವಳಿ, ಸೇರಿದಂತೆ ಇತರ ಬಿಜೆಪಿ ನಾಯಕರು ಉಪಸ್ಥಿತರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.