ಡೈರಿ ವಿಷಯ ಚರ್ಚೆಗೆ ಅವಕಾಶ ಕೊಡುತ್ತಿಲ್ಲ ಎಂದು ಬಿಜೆಪಿ ಮುಖಂಡರು ಧರಣಿ ಮುಂದುವರಿಸಿದ ಹಿನ್ನೆಲೆಯಲ್ಲಿ ವಿಧಾನಸಭೆ ಕಲಾಪವನ್ನು ಸ್ಪೀಕರ್ ಕೆ.ಬಿ.ಕೋಳಿವಾಡ್ ಸೋಮುವಾರಕ್ಕೆ ಮುಂದೂಡಿದ್ದಾರೆ.
ಸ್ಪೀಕರ್ ಕೋಳಿವಾಡ್ ತಮ್ಮ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಪಕ್ಷಗಳ ನಾಯಕರ ಸಭೆ ಕರೆದು ಸಂಧಾನಕ್ಕೆ ಪ್ರಯತ್ನಿಸಿದರಾದರೂ ಯಾವುದೇ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಕಲಾಪವನ್ನು ಮುಂದೂಡಿದ್ದಾರೆ.
ಡೈರಿಯ ಬಗ್ಗೆ ಸದನದಲ್ಲಿ ಚರ್ಚೆಯಾಗುವವರೆಗೆ ಸದನದ ಕಲಾಪ ನಡೆಯಲು ಬಿಡುವುದಿಲ್ಲ. ಚರ್ಚೆ ನಡೆದಲ್ಲಿ ಸಚಿವರ ಬ್ರಹ್ಮಾಂಡ್ ಭ್ರಷ್ಟಾಚಾರ ಬಯಲಾಗುತ್ತದೆ ಎನ್ನುವ ಆತಂಕದಿಂದ ಸರಕಾರ ಅಡ್ಡಿಪಡಿಸುತ್ತಿದೆ ಎಂದು ವಿಪಕ್ಷಗಳ ನಾಯಕರು ಆರೋಪಿಸಿದ್ದಾರೆ.
ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಇದೊಂದು ರಾಜಕೀಯ ಸಂಚು. ವಿಪಕ್ಷಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುವದು ಬಿಟ್ಟು ಕೆಟ್ಟ ರಾಜಕೀಯದಲ್ಲಿ ನಿರತವಾಗಿವೆ ಎಂದು ತಿರುಗೇಟು ನೀಡಿದರು.
ನಮ್ಮ ಬಜೆಟ್‌ಗೆ ಜನರಿಂದ ಮಾಧ್ಯಮಗಳಿಂದ ಉತ್ತಮ ಪ್ರಶಂಸೆ ವ್ಯಕ್ತವಾಗಿರುವುದು ಬಿಜೆಪಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಬಿಜೆಪಿಯವರು ಹತಾಷರಾಗಿದ್ದಾರೆ ಎಂದು ಲೇವಡಿ ಮಾಡಿದರು.
ಸಹಾರಾ ಬಿರ್ಲಾ ಕೇಸ್‌ನಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಕೋರ್ಟ್ ಕೂಡಾ ಡೈರಿ ಬಗ್ಗೆ ವಿಚಾರಣೆ ನಡೆಸಲು ತಿರಸ್ಕರಿಸಿದೆ. ಅದಾಗ್ಯೂ ಬಿಜೆಪಿಯವರು ಅನಗತ್ಯವಾಗಿ ಧರಣಿ ಮುಂದುವರಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.