ಕಾಂಗ್ರೆಸ್ ಕಾರ್ಯಕರ್ತ ವಿವೇಕ್ ಶೆಟ್ಟಿ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಬಿಜೆಪಿ ಶಾಸಕ ರಾಜು ಕಾಗೆ ಸೇರಿದಂತೆ 6 ಜನ ಆರೋಪಿಗಳಿಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಕಾಗವಾಡ ಕ್ಷೇತ್ರದ ಬಿಜೆಪಿ ಶಾಸಕ ರಾಜು ಕಾಗೆ, ಸಹೋದರ ಸಿದ್ದಗೌಡ ಕಾಗೆ, ಪುತ್ರಿ ತೃಪ್ತಿ ಕಾಗೆ, ಶೋಭಾ ಕಾಗೆ ಸೇರಿದಂತೆ ಚಾಲಕ ಬಾಹುಬಲಿಗೆ ಷರತ್ತು ಬದ್ಧ ಜಾಮೀನು ನೀಡಿ ಜಿಲ್ಲಾ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.
ಫೇಸ್‌ಬುಕ್‌ನಲ್ಲಿ ಕೆಟ್ಟದಾಗಿ ಕಮೆಂಟ್ ಮಾಡಿದ್ದಕ್ಕೆ ಕಾಂಗ್ರೆಸ್ ನಾಯಕನ ಮನೆಗೆ ನುಗ್ಗಿ ಬಿಜೆಪಿ ಶಾಸಕ ರಾಜು ಕಾಗೆ ಪುತ್ರಿ ಹಾಗೂ ಟೀಂ ಡೆಡ್ಲಿ ಅಟ್ಯಾಕ್ ಮಾಡಿದ ಘೋರ ಕೃತ್ಯ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಉಗಾರ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿತ್ತು.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಅವರ ರೌಡಿ ಗ್ಯಾಂಗ್, ಫೇಸ್‌ಬುಕ್‌ನಲ್ಲಿ ಕಮೆಂಟ್ ಮಾಡಿದ್ದ ಕಾಂಗ್ರೆಸ್ ನಾಯಕ ವಿವೇಕ ಶೆಟ್ಟಿ ಮನೆಗೆ ನುಗ್ಗಿ ಮಹಿಳೆ ಮಕ್ಕಳು ಎನ್ನುವುದನ್ನು ನೋಡದೆ ಅಟ್ಟಹಾಸ ಮೆರೆದಿದ್ದು, ಈ ಭೀಭತ್ಸ ಕೃತ್ಯದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ