ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕೈಬಿಡುವಂತೆ ತಾಕೀತು ಮಾಡಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ವಿಧಾನ ಸಭಾ ಕ್ಷೇತ್ರದ ಟಿಕೆಟ್ ನೀಡುವ ಕುರಿತು ಖಚಿತ ಪಡಿಸಿ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪನವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮಲಾಲ್ ಅವರಲ್ಲಿ ಕೇಳಿಕೊಂಡರು.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ನೀಡುವ ಕುರಿತಂತೆ ಭರವಸೆ ನೀಡಲು ಸಾಧ್ಯವಿಲ್ಲ. ಸಮೀಕ್ಷೆ ನಡೆಸಿದ ನಂತರ ಬರುವ ಫಲಿತಾಂಶ ಗಮನಿಸಿ ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಲಾಗುತ್ತದೆ ಎಂದು ಈಶ್ವರಪ್ಪ ಬೇಡಿಕೆಯನ್ನು ತಳ್ಳಿಹಾಕಿದ್ದಾರೆ.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಪಕ್ಷದ ವೇದಿಕೆ ಬಿಟ್ಟು ಪ್ರತ್ಯೇಕ ಸಂಘಟನೆ ಕಟ್ಟುವುದು ಸರಿಯಲ್ಲ. ಹೀಗಾಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕೈಬಿಡುವಂತೆ ರಾಮಲಾಲ್ ಅವರು ಈಶ್ವರಪ್ಪನವರಿಗೆ ತಾಕೀತು ಮಾಡಿದರು.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ಎಸ್.ಯಡಿಯೂರಪ್ಪ ಅಧಿಕಾರವಹಿಸಿಕೊಂಡಿದ್ದರಿಂದ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡಲು ಅಡ್ಡಿಯಾಗುತ್ತಾರೋ ಎನ್ನುವ ಆತಂಕ ಈಶ್ವರಪ್ಪರನ್ನು ಕಾಡುತ್ತಿದೆ.
ಯಡಿಯೂರಪ್ಪ, ಶೋಬಾ ಕರಂದ್ಲಾಜೆ ಮತ್ತು ಅವರ ಬೆಂಬಲಿಗರು ತಮ್ಮ ಟಿಕೆಟ್ ತಪ್ಪಿಸಲು ಸಂಚು ರೂಪಿಸಿದ್ದಾರೆ ಎನ್ನುವ ವರದಿಗಳು ಹರಿದಾಡುತ್ತಿರುವುದರಿಂದ ಕೆ.ಎಸ್.ಈಶ್ವರಪ್ಪಗೆ ಅತ್ತ ಹುಲಿ ಇತ್ತ ಬಾವಿ ಎನ್ನುವ ಪರಿಸ್ಥಿತಿ ಎದುರಿಸುತ್ತಿದ್ದಾರೆ.
ಬಿಜೆಪಿಯಲ್ಲಿ ಪ್ರಬಲ ಹಿಂದುಳಿದ ವರ್ಗಗಳ ನಾಯಕ ಎನ್ನುವ ಪಟ್ಟ ಅಲಂಕರಿಸಿದಲ್ಲಿ ಪಕ್ಷದಲ್ಲಿ ಪ್ರಭಾವ ಹೆಚ್ಚಿಸಿಕೊಳ್ಳಲು ಸಹಕಾರಿಯಾಗುತ್ತದೆ ಎನ್ನುವ ಹಿನ್ನೆಲೆಯಲ್ಲಿ, ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ಗೆ ಈಶ್ವರಪ್ಪ ಚಾಲನೆ ನೀಡಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ