ಇಂದು ಆತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಿರುವ ಪೊಲೀಸರು ಬಳಿಕ ವಿಚಾರಣೆಗಾಗಿ ವಶಕ್ಕೆ ಪಡೆಯಲಿದ್ದಾರೆ.
2013ರ ನವೆಂಬರ್ 19ರಂದು ಕಾರ್ಪೊರೇಷನ್ ವೃತ್ತದ ಎಟಿಎಂನಲ್ಲಿ ಬ್ಯಾಂಕ್ ಉದ್ಯೋಗಿ ಜ್ಯೋತಿ ಉದಯ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆದಿತ್ತು. ಘಟನೆ ನಡೆದ 3 ವರ್ಷಗಳ ಬಳಿಕ, ಕಳೆದ ತಿಂಗಳು ಆರೋಪಿ ಮಧುಕರ್ ರೆಡ್ಡಿಯನ್ನು ಆಂಧ್ರಪ್ರದೇಶದ ಮದನಪಲ್ಲಿ ಪೊಲೀಸರು ಬಂಧಿಸಿದ್ದರು. ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಆತನನ್ನು ವಿಚಾರಣೆಗೊಳಪಡಿಸಿದ್ದ ಆಂಧ್ರ ಪೊಲೀಸರು ಇದೀಗ ಆರೋಪಿಯನ್ನು ಬೆಂಗಳೂರು ಪೊಲೀಸರಿಗೆ ಒಪ್ಪಿಸಿದ್ದಾರೆ.