Daily Horoscope
✕

ಮೋದಿ ಫೋಟೋ ಸ್ಟೇಟಸ್​​ ಹಾಕಿದ್ದಕ್ಕೆ ಹಲ್ಲೆ?

Webdunia
ಸೋಮವಾರ, 20 ಮಾರ್ಚ್ 2023 (18:03 IST)
ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ಸ್ಟೇಟಸ್ ಹಾಕಿದ್ದಕ್ಕೆ ಯುವಕನೋರ್ವನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಈ ಘಟನೆ ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ನಡೆದಿದೆ. ರಾಘವೇಂದ್ರ ಪೂಜಾರ ಹಲ್ಲೆಗೊಳಗಾದ ಯುವಕ. ಕಾಂಗ್ರೆಸ್​ ಕಾರ್ಯಕರ್ತರಾದ ಮಲ್ಲರಡ್ಡಿ ಅಗಸನಕೊಪ್ಪ, ಶ್ರೀನಿವಾಸ ಅಗಸನಕೊಪ್ಪ ಮತ್ತು ಹಲವರ ವಿರುದ್ಧ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಕಾರ್ಯಕರ್ತರು, ರಾಘವೇಂದ್ರ ಪೂಜಾರ ಅವರ ಮನೆಗೆ ನುಗ್ಗಿ, ಪ್ರಧಾನಿ ಮೋದಿಯವರ ಭಾವಚಿತ್ರ ಸ್ಟೇಟಸ್ ಇಡ್ತೀಯಾ, ಮೋದಿ ಪೋಸ್ಟ್​ಗೆ ಲೈಕ್‌ ಕೋಡ್ತಿಯಾ ಅಂತ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಕಾರ್ಯಕರ್ತರು ಥರ್ಮಕೋಲ್ ಕಟರ್, ಕಲ್ಲು ಸಮೇತ ಬಂದು ಹಲ್ಲೆ ಮಾಡಿದ್ದಾರೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಹಲ್ಲೆ ವಿಷಯ ತಿಳಿಯುತ್ತಿದ್ದಂತೆ BJP ಟಿಕೆಟ್ ಆಕಾಂಕ್ಷಿ ರಾಜು ಕುರುಡಗಿ ಹಾಗೂ ಕಾರ್ಯಕರ್ತರು ಪೊಲೀಸ್ ಠಾಣೆಗೆ ತೆರಳಿ ಕೂಡಲೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಾಂಗ್ರೆಸ್ ಕಾರ್ಯಕರ್ತರಾದ ಮಲ್ಲರಡ್ಡಿ ಅಗಸಿನಕೊಪ್ಪ, ಶ್ರೀನಿವಾಸ ಅಗಸಿನಕೊಪ್ಪ ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವಾಲಯದಲ್ಲಿ ರೇಪ್ ಆಗ್ತವೆ ಎಂದಿದ್ದ ನೇಹಾ ಬೋರಾ ವಿರುದ್ಧ ಬಿತ್ತು ಕೇಸ್ Video

ಇದೆಂಥಾ ಅವಮಾನ.. ಸೋನಿಯಾ ಗಾಂಧಿ ಬಳಿ ತೆರಳುತ್ತಿದ್ದ ಸಿಎಂ ರೇವಂತ್ ರೆಡ್ಡಿಯನ್ನು ಆಚೆ ನಡೀರಿ ಎಂದು ತಳ್ಳಿದ ಭದ್ರತಾ ಸಿಬ್ಬಂದಿ Video

ಮನೆ ಹೊಸ್ತಿಲಲ್ಲಿದ್ದ ದೀಪ ತಂದ ಅನಾಹುತ.. ಡೆಲಿವರಿ ಬಾಯ್ ಸಿಲಿಂಡರ್ ತಂದಿಡುತ್ತಿದ್ದಂತೇ ಭಾರೀ ಸ್ಪೋಟ: ಭೀಕರ Video

ಮತ್ತೊಂದು ಶಾಕ್ ಗೆ ರೆಡಿಯಾಗಿ… ಕೆಎಸ್ಆರ್ ಟಿಸಿ, ಬಿಎಂಟಿಸ್ ದರ ಹೆಚ್ಚಳ ಇಂದೇ ಘೋಷಣೆ

ಜಾಗ ನೀವು ಡಿಸೈಡ್ ಮಾಡಿ ಎಂದು ಸವಾಲು ಹಾಕಿದ್ದ ರಾಹುಲ್ ಗಾಂಧಿ: ಸಂಸತ್ತು ಅಂತ ಒಂದಿದೆ ಎಂದು ತಿರುಗೇಟು ಕೊಟ್ಟ ನಿರ್ಮಲಾ ಸೀತಾರಾಮನ್

ಮುಂದಿನ ಸುದ್ದಿ
Show comments