ಗಗನಸಖಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಣಸವಾಡಿ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು ಆತನನ್ನು ಪ್ರೇಮಕುಮಾರ್ (28) ಎಂದು ಗುರುತಿಸಲಾಗಿದೆ.
ಆರೋಪಿ ಮಾರುತಿ ಸೇವಾನಗರದ ನಿವಾಸಿಯಾಗಿದ್ದು ಪೈಂಟರ್ ಕೆಲಸ ಮಾಡುತ್ತಿದ್ದಾನೆ.
ಆರೋಪಿ ಪೈಂಟರ್ ಕೆಲಸ ಮಾಡುತ್ತಿದ್ದು ಮಾರುತಿ ಸೇವಾನಗರ ನಿವಾಸಿಯಾಗಿದ್ದಾನೆ.
ಬೈಕ್ ಸವಾರರಿಬ್ಬರು ಯುವತಿಯ ಮೇಲೆ ಮಾನಭಂಗಕ್ಕೆ ಯತ್ನಿಸಿದ ಘಟನೆ ಕಮ್ಮನಹಳ್ಳಿ ರಸ್ತೆಯಲ್ಲಿ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫೆಬ್ರವರಿ 12ರಂದು ನಡೆದಿತ್ತು.
ಅಂದು ರಾತ್ರಿ ಹೊಟೆಲ್ ನಲ್ಲಿ ಊಟ ಮುಗಿಸಿಕೊಂಡು ಬರುತ್ತಿದ್ದ ಇಬ್ಬರು ಯುವತಿಯರ ಸಮೀಪ ಬಂದು ನಿಂತ ಪಲ್ಸರ್ ಬೈಕ್ ಸವಾರರು ಒಬ್ಬಾಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಆಕೆಯ ಬಟ್ಟೆ ಹರಿದು ಅತ್ಯಾಚಾರಕ್ಕೆ ಪ್ರಯತ್ನಿಸಿದ್ದಾರೆ ಆ ಸಂದರ್ಭದಲ್ಲಿ ಯುವತಿಯರು ಕಿರುಚಿಕೊಂಡಿದ್ದರಿಂದ ಆರೋಪಿ ಪರಾರಿಯಾಗಿದ್ದರು.
ಕಾರ್ಯಾಚರಣೆ ನಡೆಸಿದ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸುವಲ್ಲಿ ಯಶ ಕಂಡಿದ್ದಾರೆ.