Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಮತ್ತೆ ಯುವತಿ ಮೇಲೆ ಅಟೋ ಡ್ರೈವರ್ ದರ್ಪ

Sampriya
ಬುಧವಾರ, 2 ಅಕ್ಟೋಬರ್ 2024 (18:29 IST)
Photo Courtesy X
ಬೆಂಗಳೂರು: ಬುಕ್ಕಿಂಗ್ ರದ್ದು ಮಾಡಿದ್ದಕ್ಕೆ ರಿಕ್ಷಾ ಚಾಲಕನೊಬ್ಬ ಯುವತಿಗೆ ಕಪಾಳಮೋಕ್ಷ ಮಾಡಿ ಬೆದರಿಕೆ ಹಾಕಿದ್ದ ಘಟನೆ ಬೆನ್ನಲ್ಲೇ ಅಂತಹದ ಮತ್ತೊಂದು ಘಟನೆ ಇದೀಗ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ರಿಕ್ಷಾ ಚಾಲಕನೊಬ್ಬ ಯುವತಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಚಾಲಕ, ಯುವತಿಗೆ ಕೆಟ್ಟ ಪದಗಳಿಂದ ಬೈದಿದ್ದಾನೆ. ಸುಮ್ಮನೆ ಇಲ್ಲಿಂದ್ದ ಹೋಗು, ಇಲ್ಲದಿದ್ದರೆ ಹೊಡೆದು ಹಾಕುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. 150 ಹಣ ಕೊಡುವ ಯೋಗ್ಯತೆಯಿಲ್ಲ ಎಂದು ಯುವತಿ ಮೇಲೆ ದರ್ಪ ತೋರಿದ್ದಾನೆ. ಸದ್ಯ ಈ ವಿಡಿಯೋ ನೋಡಿದ ಮಂದಿ ಆಟೋ ಚಾಲಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಇಂತಹವರಿಂದ ಇಡೀ ಆಟೋ ಸಮುದಾಯವೇ ಕೀಳಾಗಿ ಕಾಣುತ್ತಿದೆ. ಇಂತವರಿಂದ ಪ್ರಮಾಣಿಕ ಆಟೋ ಚಾಲಕರಿಗೆ ಅವಮಾನ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ಈ ವಿಡಿಯೋ ಆಧರಿಸಿ ಕೂಡಲೇ ಆತನನ್ನು ಬಂಧಿಸಿ ಲೈಸನ್ಸ್ ರದ್ದುಪಡಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯ ವ್ಯಕ್ತವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments