ಕೆ.ಎಸ್.ಈಶ್ವರಪ್ಪ ಅವರ ಹೋರಾಟ ಕೇವಲ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾತ್ರ. ಇವರ ಹೋರಾಟ ಹಿಂದುಳಿದ ವರ್ಗದವರ ಪರ ಎನಿಸುತ್ತಿಲ್ಲ. ಈಶ್ವರಪ್ಪ ಅವರದ್ದು ಆತ್ಮಹತ್ಯೆ ರಾಜಕಾರಣ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಆಯನೂರ ಮಂಜುನಾಥ್ ವಾಗ್ದಾಳಿ ನಡೆಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮುಂದಿನ ಮುಖ್ಯಮಂತ್ರಿ ಆಗಬಾರದು ಎಂದು ಕೆಲವರ ನಿವಲು. ಹೀಗೆ ಬಯಸುವವರು ಈಶ್ವರಪ್ಪ ಅವರ ಮೇಲೆ ಬಂದೂಕು ಇಟ್ಟು ಬಿಜೆಪಿ 150 ಮಿಷನ್‌ಗೆ ಅಡ್ಡಿ ಪಡಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಮಾಜಿ ಡಿಸಿಎಂ ಆರ್.ಅಶೋಕ್, ಸಂಸದ ಸದಾನಂದಗೌಡ, ಅಂನತ್ ಕುಮಾರ್ ಹಾಗೂ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಿರುದ್ಧವೂ ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಆಯನೂರ ಮಂಜುನಾಥ್ ಆರೋಪಿಸಿದ್ದಾರೆ.
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ