ವಿಧಾನಪರಿಷತ್‍ನಲ್ಲಿ ಬುಧವಾರ ಎಂಟು ವಿಧೇಯಕಗಳಿಗೆ ಅಂಗೀಕಾರ ದೊರೆತಿದೆ.
ವಿಧಾನಸಭೆಯಿಂದ ಅಂಗೀಕೃತವಾದ ರೂಪದಲ್ಲಿರುವ ವಿಧೇಯಕಗಳನ್ನು ಪರಿಷತ್ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮೀ ಅವರು ಸಭೆಯ ಮುಂದಿಟ್ಟರು.
ಕರ್ನಾಟಕ ನಗರಪಾಲಿಕೆಗಳ ಮತ್ತು ಕೆಲವು ಇತರ ಕಾನೂನು(ಎರಡನೇ ತಿದ್ದುಪಡಿ) ವಿಧೇಯಕ, ಕರ್ನಾಟಕ ಭೂ ಕಂದಾಯ(ತಿದ್ದುಪಡಿ) ವಿಧೇಯಕ, ಕರ್ನಾಟಕ ಕೆಲವು ಇನಾಮುಗಳ ರದ್ದಿಯಾತಿ ಮತ್ತು ಕೆಲವು ಇತರ ಕಾನೂನು(ತಿದ್ದುಪಡಿ) ವಿಧೇಯಕ.
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ(ತಿದ್ದುಪಡಿ) ವಿಧೇಯಕ, ಕರ್ನಾಟಕ ನಗರಪಾಲಿಕೆಗಳ ಮತ್ತು ಕೆಲವು ಇತರ ಕಾನೂನು(ತಿದ್ದುಪಡಿ) ವಿಧೇಯಕ, ಕರ್ನಾಟಕ ರಾಜ್ಯ ಆಯುಷ್ ವಿಶ್ವವಿದ್ಯಾಲಯ ವಿಧೇಯಕ, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು(ಶಿಕ್ಷಕರ ವರ್ಗಾವಣೆ ನಿಯಂತ್ರಣ) (ಎರಡನೇ ತಿದ್ದುಪಡಿ) ವಿಧೇಯಕ, ವಿಶ್ವೇಶ್ವರಯ್ಯ ಇಂಜನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯ ವಿಧೇಯಕಗಳ ಕುರಿತು ಸದನದಲ್ಲಿ ಸುದೀರ್ಘ ಚರ್ಚೆ ನಡೆಯಿತು.
ಸದಸ್ಯರು ಹಾಗೂ ಸಚಿವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು. ಸಭೆಯಲ್ಲಿ ಮಂಡಿಸಲಾದ ಎಂಟು ವಿಧೇಯಕಗಳಿಗೆ ಸದನವು ಅಂಗೀಕರಿಸಿತು.