Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ರಾಜ್ಯದ ಹೆಣ್ಣುಮಕ್ಕಳೊಂದಿಗೆ ಸರ್ಕಾರ ನಡೆದುಕೊಂಡ ರೀತಿ ವಿರೋಧಿಸಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ಮಾಡುತ್ತಿದ್ದೇ ವೆ. ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ. ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರುತ್ತದೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ರಾಷ್ಟ್ರ ವಿರೋಧಿ ಹೇಳಿಕೆ ನೀಡಿದ್ದಾರೆ.
ದೆಹಲಿಯಲ್ಲಿ ರೈತರ ಪ್ರತಿಭಟನೆ ವೇಳೆ ರೈತರು ಕೆಂಪುಕೋಟೆ ಮೇಲೆ ರೈತ ಧ್ವಜ ಹಾರಿಸಿದ್ದರು. ಆ ವೇಳೆ ರೈತರ ವಿರುದ್ಧ ಕೇಸ್ ದಾಖಲಾಗಿತ್ತು. ಸದ್ಯ ಈಶ್ವರಪ್ಪ ರಾಷ್ಟ್ರ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.ಸರ್ಕಾರ ಈಶ್ವರಪ್ಪ ವಿರುದ್ಧ ಈಗ ಪ್ರಕರಣ ದಾಖಲಿಸಲಿ, ಎಂದು ಹರಿಪ್ರಸಾದ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರು.