ನಂಜನಗೂಡು ಉಪಚುನಾವಣೆಯಲ್ಲಿ ಸಚಿವ ಮಹದೇವಪ್ಪ ಪುತ್ರ ಸುನೀಲ್ ಭೋಸ್ ಸ್ಪರ್ಧಿಸಲ್ಲ ಎಂದು ಭವಿಷ್ಯ ನುಡಿದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮ್ಮ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಬಿಎಸ್ವೈಗೆ ಯಾವ ನೈತಿಕತೆ ಇದೆ ಎಂದು ಖಾರವಾಗಿ ಪ್ರಶ್ನಿಸಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ಜವಾಬ್ದಾರಿಯುತ ಸ್ಥಾನದಲ್ಲಿದ್ದು, ಉಡಾಫೆ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಕಿಡಿಕಾರಿದರು.
ನಂಜನಗೂಡು ಉಪಚುನಾವಣೆಯಲ್ಲಿ ಸಚಿವ ಮಹದೇವಪ್ಪ ಪುತ್ರ ಸುನೀಲ್ ಭೋಸ್ ಸ್ಪರ್ಧಿಸಲ್ಲ ಎಂದು ಬಿಎಸ್ವೈ ಹೇಳಿಕೆ ನೀಡಿದ್ದಾರೆ. ಆದರೆ, ನಮ್ಮ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಬಿಎಸ್ವೈ ಯಾರು ಎಂದು ಪ್ರಶ್ನಿಸಿದರು.
ದೇವೇಗೌಡರಿಗೆ ತಿರುಗೇಟು............
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ ಎಂದು ನಾನು ಸತ್ಯ ಹೇಳಿದ್ದೇನೆ. ಈ ಸತ್ಯ ಜೆಡಿಎಸ್ ನಾಯಕರಿಗೂ ಗೊತ್ತು. ಈ ಹಿಂದೆ ನಾವೇಲ್ಲ ಜೆಡಿಎಸ್ ಪಕ್ಷದಲ್ಲಿದ್ದಾಗಲೇ ಅಧಿಕಾರಕ್ಕೆ ಬರುಲು ಸಾಧ್ಯವಾಗಿಲ್ಲ. ಇದೀಗ ಸ್ವಂತ ಬಲದ ಮೇಲೆ ಜೆಡಿಎಸ್ ಅಧಿಕಾರಕ್ಕೆ ಬರುತ್ತದೆಯೇ ಎಂದು ಪ್ರಶ್ನಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ