Webdunia - Bharat's app for daily news and videos

Install App

ಹರ್ ಘರ್ ತಿರಂಗ ಕಾರ್ಯಕ್ರಮಕ್ಕೆ ಚಾಲನೆ: ವಿಜಯೇಂದ್ರ

Krishnaveni K
ಮಂಗಳವಾರ, 13 ಆಗಸ್ಟ್ 2024 (12:24 IST)
ಬೆಂಗಳೂರು: ಸ್ವಾತಂತ್ರö್ಯ ಹೋರಾಟದ ಕುರಿತು ಜನಜಾಗೃತಿಗಾಗಿ ಪ್ರತಿಯೊಂದು ಮನೆಯ ಮೇಲೆ ಭಾರತದ ತ್ರಿವರ್ಣ ಧ್ವಜ ಹಾರಿಸುವ ‘ಹರ್ ಘರ್ ತಿರಂಗ’ ಕಾರ್ಯಕ್ರಮಕ್ಕೆ ಚಾಲನೆ ಕೊಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
 
ಶಿವಾಜಿನಗರದ ವಸಂತ ನಗರ ವಾರ್ಡಿನ ಬೂತ್ ನಂ.44ರಲ್ಲಿ ಇಂದು ಬೆಳಿಗ್ಗೆ ಹರ್ ಘರ್ ತಿರಂಗ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸ್ವತಂತ್ರ ದಿನಾಚರಣೆಯ ಶುಭ ಸಂದರ್ಭದಲ್ಲಿ ನಮ್ಮ ರಾಷ್ಟಿಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸ್ವತಂತ್ರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕು; ಯುವ ಪೀಳಿಗೆಗೆ ಸ್ವತಂತ್ರ ಸಂಗ್ರಾಮದ ದಿನಗಳನ್ನು ನೆನಪಿಸಿ ಕೊಡಬೇಕು.  ತ್ಯಾಗ, ಬಲಿದಾನದ ಚರ್ಚೆ ಆಗಬೇಕು ಎಂದು ತಿಳಿಸಿದ್ದಾರೆ. ಅದಕ್ಕಾಗಿ ಯುವಜನತೆಯಲ್ಲೂ ದೇಶಭಕ್ತಿ ಜಾಗೃತಿಗಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ವಿವರಿಸಿದರು.

ಸಂಸದ ಪಿ.ಸಿ.ಮೋಹನ್, ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೂತ್ ಸಂಖ್ಯೆ 44ರ ಅಧ್ಯಕ್ಷ ಸಾಗರ್, ಪಕ್ಷದ ಕಾರ್ಯಕರ್ತರ ನೇತೃತ್ವದಲ್ಲಿ ತ್ರಿವರ್ಣ ಧ್ವಜ ಹಾರಿಸಲಾಗಿದೆ. ಅದೇರೀತಿ ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ತಿರಂಗಯಾತ್ರೆ ಆಯೋಜಿಸಲಾಗಿದೆ ಎಂದು ತಿಳಿಸಿದರು. ಯುವಕರಿಂದ ಬೈಕ್ ರ‍್ಯಾಲಿ ಮೂಲಕ ತಿರಂಗ ಯಾತ್ರೆ ನಡೆಸಲಾಗುತ್ತಿದ್ದು, ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ ಎಂದು ಹೇಳಿದರು.

ಇದೇ 11ರಿಂದ 15ರವರೆಗೆ ಸ್ವಾತಂತ್ರö್ಯ ಹೋರಾಟಗಾರರ ಸ್ಮಾರಕಗಳು, ಪುತ್ಥಳಿಗಳ ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದೆ. ನಾಳೆ (ಆ.14) ದೇಶದ ವಿಭಜನೆಯ ಕರಾಳ ದಿನದ ನೆನಪನ್ನು ವಿಭಜನೆಯ ಸ್ಮೃತಿ ದಿನವಾಗಿ ನೆನಪಿಸುವ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments