Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬಾಬುಸಾಬ್ ಪಾಳ್ಯ ಕಟ್ಟಡ ಕುಸಿತ ಸಂತ್ರಸ್ತರಿಗೆ ಪ್ರಧಾನಿ ಮೋದಿಯಿಂದ ಪರಿಹಾರ

Babusapalya building collapse

Krishnaveni K

ಬೆಂಗಳೂರು , ಗುರುವಾರ, 24 ಅಕ್ಟೋಬರ್ 2024 (09:22 IST)
ಬೆಂಗಳೂರು: ಬಾಬುಸಾಬ್ ಪಾಳ್ಯದ ಬಹುಮಹಡಿ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದು ಪರಿಹಾರ ಘೋಷಣೆ ಮಾಡಿದ್ದಾರೆ.

ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 8 ಕ್ಕೆ ಏರಿಕೆಯಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಕಾರ್ಯಾಲಯ ಸಂತಾಪ ವ್ಯಕ್ತಪಡಿಸಿದ್ದು, ಜೊತೆಗೆ ಮೃತರ ಕುಟುಂಬಕ್ಕೆ ಪರಿಹಾರವಾಗಿ 2 ಲಕ್ಷ ರೂ.ಗಳನ್ನು ಘೋಷಣೆ ಮಾಡಿದೆ.

ಮೃತರ ಕುಟುಂಬಕ್ಕೆ 2 ಲಕ್ಷ ರೂ., ಗಾಯಗೊಂಡವರ ಕುಟುಂಬಕ್ಕೆ 50,000 ರೂ. ಪರಿಹಾರ ಘೋಷಣೆಯಾಗಲಿದೆ. ಮೃತಪಟ್ಟವರ ಕುಟುಂಬಕ್ಕೆ ನನ್ನ ಸಂತಾಪಗಳು. ಅವರ ದುಃಖದಲ್ಲಿ ನಾನೂ ಭಾಗಿ ಎಂದು ಮೋದಿ ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡ ಕುಸಿತಕ್ಕೆ ಅಕ್ರಮವಾಗಿ ಮತ್ತು ಕಳಪೆ ಸಾಮಗ್ರಿಗಳನ್ನು ಬಳಸಿ ಬಹು ಮಹಡಿ ಕಟ್ಟಿದ್ದೇ ಕಾರಣ ಎಂದು ತಿಳಿದುಬಂದಿದೆ. ಕಾರ್ಯಾಚರಣೆ ಇಂದೂ ಮುಂದುವರಿದಿದೆ. ಇಂದು ಸಿಎಂ ಸಿದ್ದರಾಮಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಬಿಹಾರ, ಆಂಧ್ರ, ತಮಿಳುನಾಡು ಮೂಲದವರು ಸಾವನ್ನಪ್ಪಿದ್ದವರು. 14 ಮಂದಿಯನ್ನು ಸುರಕ್ಷಿತವಾಗಿ ಹೊರ ಕರೆತರಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಚನ್ನಪಟ್ಟಣದಲ್ಲಿ ಜೆಡಿಎಸ್ ನಿಂದ ಭವಾನಿ ರೇವಣ್ಣಂಗೆ ಟಿಕೆಟ್ ಕೊಡಿ, ಗೆಲ್ಲೋದು ಪಕ್ಕಾ ಅಂತೆ