ಬೆಂಗಳೂರು : ರಾಜ್ಯ ಸರ್ಕಾರ ಮೌಢ್ಯ ನಿಷೇಧ ಕಾಯ್ದೆ ಜಾರಿ ಮಾಡಿದ ಹಿನ್ನಲೆ ಸಿದ್ದರಾಮಯ್ಯ ಟ್ವೀಟ್ ಮೂಲಕ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ನಾವು ಮೌಢ್ಯ ನಿಷೇಧ ಕಾಯ್ದೆ ಜಾರಿ ಮಾಡಲು ಹೋದಾಗ ನಮ್ಮನ್ನ ನಿಂದಿಸಿ, ಅಪಪ್ರಚಾರ ಮಾಡಿ ತಡೆಯಲು ಯತ್ನಿಸಿದರು . ಈಗ ರಾಜ್ಯ ಬಿಜೆಪಿ ಸರ್ಕಾರ ತನ್ನ ತಪ್ಪನ್ನು ತಿದ್ದಿಕೊಂಡು ಈ ಕಾಯ್ದೆಯನ್ನು ಜಾರಿಗೆ ತಂದಿದ್ದಕ್ಕ ಅಭಿನಂದನೆಗಳು ಎಂದು ಹೇಳಿದ್ದಾರೆ.
ಹಾಗೇ ಈಗಿನ ನಂಬಿಕೆ ಒತ್ತಡಕ್ಕೆ ಬಾಗಿ ಮೂಢನಂಬಿಕೆ ಆಗದಿರಲಿ ಎಂದು ಟ್ವೀಟ್ ಮೂಲಕ ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಟಾಂಗ್ ನೀಡಿದ್ದಾರೆ.