Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಜಿ.ಪರಮೇಶ್ವರ್ ಮೇಲಿನ ಐಟಿ ದಾಳಿ ಹಿನ್ನಲೆ; ಇಂದು ಕೊರಟಗೆರೆ ಪಟ್ಟಣ ಬಂದ್

ಜಿ.ಪರಮೇಶ್ವರ್ ಮೇಲಿನ ಐಟಿ ದಾಳಿ ಹಿನ್ನಲೆ; ಇಂದು ಕೊರಟಗೆರೆ ಪಟ್ಟಣ ಬಂದ್
ತುಮಕೂರು , ಶನಿವಾರ, 12 ಅಕ್ಟೋಬರ್ 2019 (08:09 IST)
ತುಮಕೂರು : ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಮನೆ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲಿನ ಐಟಿ ದಾಳಿ ನಡೆಸಿದ ಹಿನ್ನಲೆಯಲ್ಲಿ ಇಂದು ಕೊರಟಗೆರೆ ಪಟ್ಟಣ ಬಂದ್ ಗೆ ಕೊರಟಗೆರೆ ಬ್ಲಾಕ್ ಕಾಂಗ್ರೆಸ್ ಕರೆ ನೀಡಿದೆ.




ರಾಜ್ಯದ ಸಜ್ಜನ ರಾಜಕಾರಣಿ, ಮಾಜಿ ಡಿಸಿಎಂ ಡಾ.ಜಿ. ಪರಮೇಶ್ವರ್‌ ವಿರುದ್ಧ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಐಟಿ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ರಾಜಕೀಯ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿ ಈ ಬಂದ್ ಕರೆ ನೀಡಿರುವುದಾಗಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅರಕೆರೆ ಶಂಕರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಆದಕಾರಣ ಅ.12 ಶನಿವಾರ ಬೆಳಗ್ಗೆ 10 ಗಂಟೆಗೆ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಿಂದ ತಾಲೂಕು ಕಚೇರಿವರೆಗೆ ಕೊರಟಗೆರೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮತ್ತು ಬಂದ್ ನಡೆಸಲಾಗುತ್ತಿದೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

2 ಸಾವಿರ ರೂ. ಮುಖಬೆಲೆಯ ಖೋಟಾನೋಟು : ಹುಡುಗರು ಅರೆಸ್ಟ್