ಬೆಂಗಳೂರು : ತೆಲಂಗಾಣದ ಟೆಕ್ಕಿಯಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ವಿದೇಶದಿಂದ ಬರುವ ಪ್ರಜೆಗಳ ಮೇಲೆ ತೀವ್ರ ನಿಗಾ ಇಡಲಾಗಿದೆ. ಜಿಲ್ಲಾಡಳಿತ, ರಾಜ್ಯ ಸರ್ಕಾರ, ಕೇಂದ್ರದ ತಂಡಗಳಂತೆ 3 ತಂಡಗಳಾಗಿ ವೈದ್ಯರು ಪರಿಶೀಲನೆ ನಡೆಸುತ್ತಿದ್ದಾರೆ.
ತಜ್ಞ ವೈದ್ಯರು, ಸಿಬ್ಬಂದಿಯಿಂದ ವೈದ್ಯಕೀಯ ತಪಾಸಣೆ ನಡೆಸಲಾಗುವುದು. ಶಂಕಿತರಲ್ಲಿ ಸೋಂಕು ಪತ್ತೆಯಾದ್ರೆ ರಾಜೀವ್ ಗಾಂಧಿ ಮೆಡಿಕಲ್ ಆಸ್ಪತ್ರೆಗೆ ಕಳಿಸಲು ಸಿದ್ಧತೆ ನಡೆಸಲಾಗುತ್ತಿದೆ.