Webdunia - Bharat's app for daily news and videos

Install App

ಮಾಜಿ ಶಾಸಕ ಇದಿನಬ್ಬ ಮನೆಗೆ ನುಗ್ಗಲು ಯತ್ನ: ಭಜರಂಗ ದಳ ಕಾರ್ಯಕರ್ತರ ಬಂಧನ

Webdunia
ಬುಧವಾರ, 11 ಆಗಸ್ಟ್ 2021 (16:44 IST)
ಮಂಗಳೂರಿನ ಮಾಜಿ ಶಾಸಕ ಇದಿನಬ್ಬ ಪುತ್ರನ ಮನೆ ಇರುವ  ಉಳ್ಳಾಲದ ಮಾಸ್ತಿಕಟ್ಟೆ ಬಳಿ ವಿಶ್ವ ಹಿಂದೂ ಪರಿಷತ್‌ ಹಾಗೂ ಬಜರಂಗದಳದ ಕಾರ್ಯಕರ್ತರು ನುಗ್ಗಲು ಯತ್ನಿಸಿದ್ದು, ಇದನ್ನು ಪೊಲೀಸರು ತಡೆದು ಕಾರ್ಯಕರ್ತರನ್ನು ಬಂಧಿಸಿದರು.
ಈ ಹಿಂದೆ ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಆರೋಪದಡಿ ಮಾಜಿ ಶಾಸಕ ಇದಿನಬ್ಬರ ಪುತ್ರ ಬಿ.ಎಂ ಬಾಷಾ ಮನೆಗೆ ಎನ್‌ ಐಎ ಅಧಿಕಾರಿಗಳು ದಾಳಿ ನಡೆಸಿ ಅವ್ರ ಪುತ್ರನನ್ನು ಬಂಧಿಸಿತ್ತು. ಅಲ್ಲದೇ, ಈ ಹಿಂದೆಯೂ ಮನೆಯ ಒಬ್ಬ ಸದಸ್ಯೆ ಉಗ್ರ ಸಂಘಟನೆಗಳ ಜೊತೆಗೆ ನಂಟು ಹೊಂದಿ ಸಿರಿಯಾ ದೇಶಕ್ಕೆ ತೆರಳಿದ್ದರು. ಮನೆಯಲ್ಲಿ ಹಿಂದೂ ಧರ್ಮದಿಂದ ಮತಾಂತರಗೊಂಡ ಮಹಿಳೆಯೊಬ್ಬರು ಉಗ್ರ ಸಂಘಟನೆ ಜೊತೆಗೆ ಸಂಪರ್ಕ ಇರುವ ಕುರಿತು ಎನ್‌ ಐಎ ಮಾಹಿತಿ ಕಲೆಹಾಕಿ ಆಕೆಯ ಪಾಸ್‌ ಪೋರ್ಟ್​ ಅನ್ನು ಸೀಜ್​ ಮಾಡಿದೆ ಎಂದು ಹೇಳಲಾಗ್ತಿದೆ. ಇದೀಗ ವಿಹಿಂಪ
, ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಇದಿನಬ್ಬರ ಪುತ್ರನ ಮನೆಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments