Publish Date: Thu, 04 May 2023 (16:00 IST)
Updated Date: Thu, 04 May 2023 (16:36 IST)
ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್ ಮಾಡ್ತೀವಿ ಎಂದು ಹೇಳಿದ್ದು, ರಾಜ್ಯಾದ್ಯಂತ ಕಿಚ್ಚಿಗೆ ಕಾರಣವಾಗಿದೆ. ಬಿಜೆಪಿ ನಾಯಕರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಮುಗಿಬಿದ್ದಿದ್ದು, ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಸಿಎಂ B.S. ಯಡಿಯೂರಪ್ಪ, ಬಜರಂಗದಳ ನಿಷೇಧ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್‌ನವರು ಹುಚ್ಚುಹುಚ್ಚಾಗಿ ಮಾತಾಡ್ತಿದ್ದಾರೆ. ಜನ ಅವರಿಗೆ ತಕ್ಕ ಪಾಠ ಕಲಿಸ್ತಾರೆ ಎಂದು ತಿರುಗೇಟು ನೀಡಿದರು. ನಾವು 130ರಿಂದ 140 ಸೀಟ್ ಗೆಲ್ತೇವೆ, ನಾವು ಯಾರ ಬೆಂಬಲವೂ ಇಲ್ಲದೇ ಸರ್ಕಾರ ರಚಿಸ್ತೇವೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.