ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗ ಹತ್ಯೆ ಪ್ರಕರಣದ ಎರಡನೇ ಆರೋಪಿ ಶ್ರೀಕಾಂತ್‌ಗೆ ಜಾಮೀನು ಸಿಕ್ಕಿದೆ.
ನಗರದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆರೋಪಿಗೆ ಷರತ್ತುಬದ್ಧ ಜಾಮೀನು ನೀಡಿದೆ. ಈತ ಪ್ರಕರಣದ ಮೊದಲನೇ ಆರೋಪಿ ನರೇಶ್ ಶೆಣೈಯ ಸಹಚರನಾಗಿದ್ದಾನೆ.
ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ್ ಬಾಳಿಗಾ ಕೊಲೆಗೆ ಸಂಚು ರೂಪಿಸಿದ್ದ ಆರೋಪದಲ್ಲಿ ಕಳೆದ ಜೂನ್ ತಿಂಗಳಲ್ಲಿ ಶ್ರೀಕಾಂತ್ ಬಂಧನವಾಗಿತ್ತು. ಜುಲೈ ತಿಂಗಳಾಂತ್ಯದಲ್ಲಾತ ಜಾಮೀನು ಕೋರಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದ.
ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈಗೆ ಹೈಕೋರ್ಟ್ ಈಗಾಗಲೇ ಜಾಮೀನು ನೀಡಿದೆ. ಕೊಲೆಯಲ್ಲಿ ಶ್ರೀಕಾಂತ ಪಾತ್ರವಿಲ್ಲ. ಹತ್ಯೆ ಸಂಚು ರೂಪಿಸುವುದರಲ್ಲಿ ಮಾತ್ರ ಆತ ಪಾಲ್ಗೊಂಡಿದ್ದ ಎಂದು ಪೊಲೀಸರು ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದ್ದಾರೆ ಎಂದು ಆರೋಪಿ ಪರ ವಕೀಲರು ನಡೆಸಿದ ವಾದವನ್ನು ಪರಿಗಣಿಸಿದ ಕೋರ್ಟ್ ಆತನಿಗೆ ಜಾಮೀನು ನೀಡಿದೆ.
ವೈಯಕ್ತಿತ ಭದ್ರತೆ, 1 ಲಕ್ಷ ರೂಪಾಯಿ ಬಾಂಡ್ ನೀಡಬೇಕು. ಸಾಕ್ಷಿಗಳ ಮೇಲೆ ಪ್ರಭಾವ ಬೀರುವುದು, ಸಾಕ್ಷ್ಯನಾಶ ಮಾಡುವುದು ಸಲ್ಲದು. ನ್ಯಾಯಾಲಯ ಮತ್ತು ಪೊಲೀಸ್ ಠಾಣೆಗೆ ಕರೆದಾಗ ತಪ್ಪದೆ ಹಾಜರಾಗಬೇಕು ಎಂದು ಕೋರ್ಟ್ ಷರತ್ತು ವಿಧಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ