Webdunia - Bharat's app for daily news and videos

Install App

ಆ.31ರಂದು ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧ

Webdunia
ಸೋಮವಾರ, 29 ಆಗಸ್ಟ್ 2022 (21:04 IST)
ಗಣೇಶ ಹಬ್ಬವನ್ನು ಆಚರಿಸಲು ಇಡೀ ರಾಜ್ಯ ಸಜ್ಜಾಗಿದೆ. ಈಗಾಗಲೇ ಮಾರ್ಕೆಟ್ಗಳಲ್ಲಿ ಹಬ್ಬದ ಖರೀದಿ ಶುರುವಾಗಿದೆ. ಹಬ್ಬದ ತಯಾರಿ ಜೋರಾಗಿ ಸಾಗಿದೆ. ಇದರ ನಡುವೆ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಬೆಂಗಳೂರಿನಲ್ಲಿ ಆ.31ರಂದು ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲ ಕಸಾಯಿಖಾನೆಯಲ್ಲಿ ಪ್ರಾಣಿವಧೆ ನಿಷೇಧ ಅನ್ವಯವಾಗಲಿದೆ. ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟ ನಿಷೇಧ ಮಾಡಲಾಗಿದೆ. ಈ ಕುರಿತು ಬಿಬಿಎಂಪಿ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. 2022ರ ಆಗಸ್ಟ್ 31ರ ಬುಧವಾರದಂದು ‘ಗಣೇಶ ಚತುರ್ಥಿ’ ಹಬ್ಬದ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಹಿಂದೆ ಕೂಡ ಇದೇ ತಿಂಗಳ ಆರಂಭದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದಂದು ಮಾಂಸ ಮಾರಾಟ ಮತ್ತು ಪ್ರಾಣಿ ವಧೆಯನ್ನು ನಿಷೇಧಿಸಿ ನಾಗರಿಕ ಸಂಸ್ಥೆ ಸುತ್ತೋಲೆ ಹೊರಡಿಸಿತ್ತು. ಈಗ ಗಣೇಶ ಚತುರ್ಥಿ ಹಬ್ಬಕ್ಕೂ ಇದೇ ಆದೇಶ ಮುಂದುವರೆದಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments