Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮಸೀದಿಗಳ ಸೂಕ್ಷ್ಮ ಪ್ರದೇಶದಲ್ಲಿ ಬಂದೋಬಸ್ತ್?

ಮಸೀದಿಗಳ ಸೂಕ್ಷ್ಮ ಪ್ರದೇಶದಲ್ಲಿ ಬಂದೋಬಸ್ತ್?
ಬೆಳಗಾವಿ , ಸೋಮವಾರ, 9 ಮೇ 2022 (10:46 IST)
ಬೆಳಗಾವಿ : ಮಸೀದಿಗಳಲ್ಲಿ ಅಜಾನ್ ಶಬ್ದದ ಕಿರಿಕಿರಿ ವಿರುದ್ಧ ಹಿಂದೂಪರ ಸಂಘಟನೆಗಳಿಂದ ಇಂದಿನಿಂದ ರಾಜ್ಯಾದ್ಯಂತ ಅಜಾನ್ ವಿರುದ್ಧ ದೇವಸ್ಥಾನಗಳಲ್ಲಿ ಸುಪ್ರಭಾತ,

ಚಾಲಿಸಾ ಪಠಣ ಹಿನ್ನೆಲೆ ಬೆಳಗಾವಿಯಲ್ಲಿ 500ಕ್ಕೂ ಹೆಚ್ಚು ಮಸೀದಿಗಳು ಸೇರಿ ಸೂಕ್ಷ್ಮ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

ಇಂದು ಬೆಳಗ್ಗೆ 5ಕ್ಕೆ ಬೆಳಗಾವಿ ನಗರದ ಆರ್ಟಿಓ ವೃತ್ತದ ಬಳಿಯ ಆಂಜನೇಯ ದೇವಸ್ಥಾನದಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಹನುಮಾನ್ ದೇವರ ಮೂರ್ತಿಗೆ ಆರತಿ ಮಾಡಿ, ಹನುಮಾನ ಚಾಲೀಸಾ ಪಠಣ ಮಾಡಿ ಸ್ಪೀಕರ್ ನಲ್ಲಿ ಭಜನೆ ಹಾಡು ಹಾಕಿದರು.

ಹೀಗೆ ಜಿಲ್ಲೆಯ ಹಲವು ದೇವಸ್ಥಾನಗಳಲ್ಲಿ ಭಜನೆ, ಹನುಮಾನ್ ಚಾಲೀಸಾ, ಮಂತ್ರ ಪಠಣ ಇಂದಿನಿಂದ ಪ್ರಾರಂಭಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬೆಳಗಾವಿ ನಗರದ ನೂರು, ಜಿಲ್ಲೆಯ 500ಕ್ಕೂ ಹೆಚ್ಚು ಮಸೀದಿಗಳು ಸೇರಿ ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸರಿಂದ ತೀವ್ರ ಭದ್ರತೆ ವಹಿಸಲಾಗಿದೆ.

 

Share this Story:

Follow Webdunia kannada

ಮುಂದಿನ ಸುದ್ದಿ

ನೆರೆಮನೆಯ ಯುವಕನ ಕಿರುಕುಳ ತಾಳಲಾರದೇ ಯುವತಿ ಆತ್ಮಹತ್ಯೆ