Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಎರಡನೆ ವಾರದ ವೀಕೆಂಡ್ ಕರ್ಫ್ಯೂ ಯಶಸ್ವಿಯಾಗಿ ಪೂರ್ಣಗೊಂಡ ಬೆನ್ನಲೆ ಸಿಲಿಕಾನ್ ಸಿಟಿ ಬೆಂಗಳೂರು ನಗರ ಮತ್ತೆಸಹಜ ಸ್ಥಿತಿಗೆ ಮರಳಿದೆ. ಬೆಳಿಗ್ಗೆಯಿಂದಲೇ ನಗರದಲ್ಲಿ ವಾಹನಗಳ ಓಡಾಟ ಶುರುವಾಗಿದ್ದು, ವೀಕೆಂಡ್ನಲ್ಲಿ ಸಂಕ್ರಾಂತಿ ಹಬ್ಬಕ್ಕೆಂದು ಊರುಗಳಿಗೆ ತೆರಳಿದ್ದ ಜನರು ನಗರಕ್ಕೆ ವಾಪಸಾಗಿದ್ದಾರೆ.ಇಂದಿನಿಂದ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ ಐದು ಗಂಟೆವರೆಗೆ ನೈಟ್ ಕರ್ಫ್ಯೂ ಮಾತ್ರ ಜಾರಿಯಲ್ಲಿರುತ್ತದೆ. ಉಳಿದಂತೆ ಕೆಲ ವಾಣಿಜ್ಯ ಉದ್ದಿಮೆಗಳು, ಮಾಲ್ಗಳು, ಚಿತ್ರಮಂದಿರಗಳು, ಪಬ್, ಬಾರ್ಗಳು ಕೊರೊನಾ ನಿಯಮದಡಿ ಕರ್ತವ್ಯ ನಿರ್ವಹಿಸಲಿವೆ ಎಂದು ಹೇಳಲಾಗಿದೆ.