Webdunia - Bharat's app for daily news and videos

Install App

ಚುನಾವಣೆಗೆ ಸಿದ್ಧತೆ ಮಾಡಿಕೊಂಡ ಬೆಂಗಳೂರು ನಗರ ಚುನಾವಣಾಧಿಕಾರಿ ತುಷಾರ್ ಗಿರಿನಾಥ್

Webdunia
ಮಂಗಳವಾರ, 9 ಮೇ 2023 (14:00 IST)
ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 8802 ಮತಗಟ್ಟೆಗಳಿಗೆ ಇಂದು ಸಿಬ್ಬಂದಿಗಳು ತೆರಳಲಿದ್ದಾರೆ.42 ಸಾವಿರ ಜನರಿಗೆ ಚುನಾವಣಾ ಕೆಲಸಕ್ಕೆ ನಿಯೋಜನೆ ಮಾಡಿದ್ದೇವೆ.ಮಸ್ಟರಿಂಗ್ ಸೆಂಟರ್ ನಲ್ಲಿ ತಿಂಡಿ ಊಟದ ವ್ಯವಸ್ಥೆ ಮಾಡಿದ್ದೇವೆ ಎಂದು ತುಷಾರ್ ಗಿರಿನಾಥ್ ಪ್ರತಿಕ್ರಿಯಿಸಿದ್ದಾರೆ.
 
ನಿಯೋಜಿತ ಸಿಬ್ಬಂದಿಗಳು ಆಯಾ ಮಸ್ಟರಿಂಗ್ ಸೆಂಟರ್ ಗಳಲ್ಲಿ ಇವಿಎಮ್ ಪಡೆದು 
ಇಂದು ಸಂಜೆ ವೇಳೆಗೆ ಮತಗಟ್ಟೆಗೆ ತೆರಳ್ತಾರೆ .ನಾವು ಈಗಾಗ್ಲೇ ರೂಟ್ ಮ್ಯಾಪ್ ಫಿಕ್ಸ್ ಮಾಡಿದ್ದೆವೆ.ಒಂದು  ಬಸ್ ನಲ್ಲಿ ಐದರಿಂದ ಆರು ಮತಗಟ್ಟಡಗಳಿಗೆ ಸಂಬಂಧಿಸಿದ ಸಿಬ್ಬಂದಿಗಳನ್ನು  ಡ್ರಾಪ್ ಮಾಡಲಾಗುವುದು.ನಾಳೆ ಬೆಳಗ್ಗೆ ಮತಗಟ್ಟೆಗಳಲ್ಲಿ ಆರು ಗಂಟೆಗೆ ಅಣಕು ಮತದಾನ ನಡೆಯಲಿದೆ .ನಂತರ ಬೆಳಗ್ಗೆ ಏಳು ಗಂಟೆಗೆ ಮಗದಾನ ಆರಂಭವಾಗಲಿದೆ.
 
ಇವಿಎಮ್ ಗಳಲ್ಲಿ ದೋಷ ಕಂಡು ಬಂದರೆ ತಕ್ಷಣವೇ ಸರಿಪಡಿಸಲು ಸೆಕ್ಟರ್ ಆಫೀಸರ್ ಗಳನ್ನು ನಿಯೋಜನೆ ಮಾಡಲಾಗಿದೆ .30 ನಿಮಿಷಗಳ ಸರಿ ಮಾಡುವಂತಹ ಕೆಲಸ ಮಾಡಲಾಗುವುದು,ಕ್ಯೂ ಆ್ಯಪ್ ಮೂಲಕ ಮತದಾನಕ್ಕೆ ಸಮಯ ನಿಗಧಿ ಪಡಿಸಿಕೊಳ್ಳಬಹುದು.600 ಕಡೆ ಪಾರ್ಕಿಂಗ್ ವ್ಯವಸ್ಥೆ ಮಾಡಿದ್ದೇವೆ .ಪ್ರತಿ 15 ರಿಂದ 20 ನಿಮಿಷಕ್ಕೆ ಕ್ಯೂ ಆ್ಯಪ್ ಅಪ್ ಡೇಟ್ ಆಗಲಿದೆ.ಪ್ರತಿ ವಿಧಾನ ಸಭಾ ಕ್ಷೇತ್ರದಲ್ಲಿ 5 ಮಹಿಳಾ ಮಾದರಿ ಮತಗಟ್ಟೆಗಳಿವೆ.ಉಳಿದಂತೆ ಥೀಮ್ ಬೇಸ್ಡ್ ಮತಗಟ್ಟೆಗಳನ್ನಿ ಮಾಡಲಾಗಿದ್ದು ಮತದಾನ ಪ್ರಮಾಣ ಹೆಚ್ಚಳ ಮಾಡುವ ಉದ್ದೇಶವಿದೆ ಎಂದುಬೆಂಗಳೂರು ನಗರ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಬೆಂಗಳೂರು-ಕನಕಪುರ ರಸ್ತೆಯಲ್ಲಿ ಬಸ್ ಪಲ್ಟಿ: ಸಬ್‌ಇನ್ಸ್‌ಪೆಕ್ಟರ್‌ ಸೇರಿ ಇಬ್ಬರು ದಾರುಣ ಸಾವು

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

ಮುಂದಿನ ಸುದ್ದಿ
Show comments