Webdunia - Bharat's app for daily news and videos

Install App

ಬೆಂಗಳೂರು ಸೇಫ್ ಸಿಟಿ

Webdunia
ಶುಕ್ರವಾರ, 7 ಜನವರಿ 2022 (16:34 IST)
ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವ ಮೂಲಕ ಉದ್ಯಾನನಗರಿ ಬೆಂಗಳೂರನ್ನು ಸೇಫ್ ಸಿಟಿಯನ್ನಾಗಿ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ.
ಅಪರಾಧ ಪ್ರಕರಣಗಳು ಹಾಗೂ ಪತ್ತೆಯಾಗಿರುವ ಕಳವು ಪ್ರಕರಣಗಳ ಬಗ್ಗೆ ಮಾಹಿತಿ ನೀಡುವ ಸಲುವಾಗಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅಪರಾಧ ಪ್ರಕರಣಗಳ ನಿಯಂತ್ರಣದ ಬಗ್ಗೆ ವಿವರಣೆ ನೀಡಿದರು.
 
ಸರಗಳ್ಳತನ, ಡಕಾಯಿತಿ, ಕೊಲೆ, ರೌಡಿ ಚಟುವಟಿಕೆಗಳನ್ನು ಮಟ್ಟ ಹಾಕಲಾಗಿದೆ. ಈ ಹಿಂದೆ ರೌಡಿಗಳು ಆಯಾ ಪ್ರದೇಶದ ಚೌಕಟ್ಟನ್ನು ವಿಧಿಸಿಕೊಂಡು ಪಾರುಪತ್ಯ ಸಾಧಿಸುತ್ತಿದ್ದರು. ಮಚ್ಚು , ಲಾಂಗ್ ಸೇರಿದಂತೆ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಓಡಾಡುತ್ತಿದ್ದ ಪ್ರಸಂಗಗಳು ವರದಿಯಾಗಿದ್ದವು. ಸರಗಳ್ಳತನ, ದರೋಡೆ ಪ್ರಕರಣಗಳು ಹೆಚ್ಚಿದ್ದವು.
 
ಪೊಲೀಸರು ಬಿಗಿ ಕ್ರಮ ಕೈಗೊಳ್ಳುವ ಮೂಲಕ ಎಲ್ಲದಕ್ಕೂ ಕಡಿವಾಣ ಹಾಕಲಾಗಿದೆ. ಹಿಂದಿನ ವರ್ಷಕ್ಕೆ ಹೋಲಿಸಿಕೊಂಡರೆ ಅಪರಾಧದ ಪ್ರಕರಣಗಳ ಸಂಖ್ಯೆ ಕಡಿಮೆ ಇದೆ. ಹಾಗಾಗಿ ನಗರದ ಜನರಲ್ಲಿ ಸುರಕ್ಷತೆಯ ಭಾವನೆಯಿದೆ ಎಂದು ಆಯುಕ್ತರು ಹೇಳಿದರು. ರೌಡಿ ಚಟುವಟಿಕೆಗಳನ್ನು ನಡೆಸುತ್ತಿದ್ದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಕೆಲವರು ಜೈಲಿನಲ್ಲಿದ್ದುಕೊಂಡೇ ಅಪರಾಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು. ಅಂಥವರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.
 
ಜೈಲಿನಲ್ಲಿದ್ದವರಿಗೆ ಸಹಾಯ ಮಾಡುತ್ತಿದ್ದ ಸಹಚರರ ಮೇಲೂ ನಿಗಾ ಇಟ್ಟು ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಕಾನೂನು ಬಾಹಿರ ಚಟುವಟಿಕೆಗಳು ತಗ್ಗಿವೆ ಎಂದರು. 2020ರ ಜುಲೈ ನಂತರ ಮಾದಕ ವಸ್ತುಗಳ ವಿರುದ್ಧ ಸಮರವನ್ನೇ ಸಾರಲಾಗಿತ್ತು. ಹಲವಾರು ಮಂದಿ ಡ್ರಗ್ ಪೆಡ್ಲರ್‍ಗಳನ್ನು ಬಂಸಲಾಗಿದೆ. ಮಾದಕವಸ್ತು ಜಾಲದಲ್ಲಿದ್ದ ಸೆಲೆಬ್ರಿಟಿಗಳನ್ನು ಕೂಡ ಬಂಸಿದ್ದೇವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ