ಮೈಸೂರು : ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಸರ್ವಿಸ್ ರಸ್ತೆಗಳ ಕಾಮಗಾರಿ ಪೂರ್ಣವಾಗುವವರೆಗೆ ಸುಂಕ ವಸೂಲಾತಿಯನ್ನು ಮುಂದೂಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ.
ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿ ಸರ್ವಿಸ್ ರಸ್ತೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ಟೋಲ್ ಸಂಗ್ರಹ ನಿರ್ಧಾರವನ್ನು ಮುಂದೂಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಸರ್ವಿಸ್ ರಸ್ತೆ ಕಾಮಗಾರಿ ಪೂರ್ಣವಾಗದೇ ಇದ್ದರೂ ಸುಂಕ ವಸೂಲಾತಿ ಮಾಡಲು ತೀರ್ಮಾನ ಕೈಗೊಂಡಿದ್ದಕ್ಕೆ ಜನಸಾಮಾನ್ಯರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು.
ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ 11ರಂದು ನೂತನ ಹೆದ್ದಾರಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಈ ಸಂದರ್ಭದಲ್ಲಿಯೇ ಎರಡನೇ ಹಂತದ ಕಾಮಗಾರಿಯು ಮುಕ್ತವಾಗಲಿದೆ ಎಂದು ಹೇಳಲಾಗುತ್ತಿದೆ.