Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಬೆಂಗಳೂರು ವಿಶ್ವನಿದ್ಯಾಲಯಕ್ಕೆ ಕೆಂಪೇಗೌಡರ ಹೆಸರು: ಸಿಎಂ

ಬೆಂಗಳೂರು ವಿಶ್ವನಿದ್ಯಾಲಯಕ್ಕೆ ಕೆಂಪೇಗೌಡರ ಹೆಸರು: ಸಿಎಂ
ಬೆಂಗಳೂರು , ಮಂಗಳವಾರ, 27 ಜೂನ್ 2017 (15:41 IST)
ಬೆಂಗಳೂರು ವಿಶ್ವನಿದ್ಯಾಲಯಕ್ಕೆ ಕೆಂಪೇಗೌಡ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
 
ವಿಧಾನಸೌಧದ ಬ್ಯಾಕ್ವೆಂಟ್ ಹಾಲ್‌ನಲ್ಲಿ ಆಯೋಜಿಸಲಾದ ನಾಡಪ್ರಭು ಕೆಂಪೇಗೌಡರ ಜಯಂತಿ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬೆಂಗಳೂರು ವಿಶ್ವವಿದ್ಯಾಲಯವನ್ನು ಮೂರು ವಿಭಾಗಗಳಾಗಿ ವಿಂಗಡಿಸಲಾಗಿದೆ.ಆದರಲ್ಲಿ ಒಂದಕ್ಕೆ ಕೆಂಪೇಗೌಡರ ಹೆಸರಡಿಲಾಗುವುದು ಎಂದು ತಿಳಿಸಿದ್ದಾರೆ.
 
ಕೆಂಪೇಗೌಡರ ಹೆಸರು ಅಜರಾಮರವಾಗಿರಬೇಕು ಎನ್ನುವ ಉದ್ದೇಶದಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಡಿಲಾಗಿದೆ. ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ ಹೆಸರನ್ನು ಶಿಫಾರಸ್ಸು ಮಾಡಿದೆ ಎಂದರು.
 
ಕೆಂಪೇಗೌಡರು ಸಾರ್ವಜನಿಕರಿಗಾಗಿ ನೂರಾರು ಕೆರೆಗಳನ್ನು ಕಟ್ಟಿಸಿದರು. ಆದರೆ, ಇಂದು ಕೆರೆಗಳನ್ನು ನುಂಗುವ ಕಾರ್ಯವಾಗುತ್ತಿದೆ. ಭೂ ಕಬಳಿಕೆಯನ್ನು ತಡೆಯಲು ಕೆಂಪೇಗೌಡರ ಅಭಿವೃದ್ಧಿ ಪ್ರಾಧೀಕಾರ ರಚಿಸಿದ್ದೇವೆ ಎಂದರು.
 
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಂದೆ ಕೇಂದ್ರ ಮತ್ತು ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಿಸಲಾಗುವುದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಲೈಂಗಿಕ ಕಿರುಕುಳ ತಡೆದ ಯುವತಿಯನ್ನು ಜೀವಂತವಾಗಿ ದಹಿಸಿದ ದುರುಳ