Bantwal murder: ಅಬ್ದುಲ್ ರಹಿಮಾನ್ ಮರ್ಡರ್: ಯಾರನ್ನೂ ಸುಮ್ನೇ ಬಿಡಲ್ಲ ಎಂದು ಗುಡುಗಿದ ಸಿದ್ದರಾಮಯ್ಯ

Krishnaveni K
ಬುಧವಾರ, 28 ಮೇ 2025 (10:38 IST)
ಬಂಟ್ವಾಳ: ತಾಲೂಕಿನ ಅಬ್ದುಲ್ ರಹಿಮಾನ್ ಎಂಬಾತನನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಯಾರನ್ನೂ ಸುಮ್ನನೇ ಬಿಡಲ್ಲ ಎಂದಿದ್ದಾರೆ.

ಮೊನ್ನೆಯಷ್ಟೇ ಮಂಗೂರಿನಲ್ಲಿ ಸುಹಾಸ್ ಶೆಟ್ಟಿ ಎಂಬ ಹಿಂದೂ ಕಾರ್ಯಕರ್ತನನ್ನು ಕೆಲವು ಮುಸ್ಲಿಂ ಯುವಕರ ಗುಂಪು ಕೊಚ್ಚಿ ಕೊಲೆ ಮಾಡಿತ್ತು. ಈ ಘಟನೆ ಬಳಿಕ ಮಂಗಳೂರು ಬೂದಿ ಮುಚ್ಚಿದ ಕೆಂಡದಂತಿತ್ತು. ಇದೀಗ ದಕ್ಷಿಣ ಕನ್ನಡದಲ್ಲಿ ಮತ್ತೊಮ್ಮೆ ತಲ್ವಾರ್ ಸದ್ದು ಮಾಡಿದೆ.

ಪಿಕ್ ಅಪ್ ವಾಹನ ಚಾಲಕನಾಗಿದ್ದ ಅಬ್ದುಲ್ ರಹಿಮಾನ್ ಎಂಬಾತನನ್ನು ಇಬ್ಬರು ಆಗಂತುಕರು ಬೈಕ್ ನಲ್ಲಿ ಬಂದು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಘಟನೆ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ‘ದಕ್ಷಿಣ ಕನ್ನಡದಲ್ಲಿ ಯುವಕನೊಬ್ಬನ ಹತ್ಯೆಯಾಗಿದ್ದು, ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ತಪ್ಪಿತಸ್ಥರು ಯಾರೇ ಆಗಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ’ ಎಂದು ಸಿಎಂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಲೈಮ್ಯಾಕ್ಸ್‌ ಹಂತ ತಲುಪಿದ ಧರ್ಮಸ್ಥಳ ಬುರುಡೆ ಕೇಸ್‌: ಎಸ್‌ಐಟಿ ಚಾರ್ಜ್‌ಶೀಟ್‌ನತ್ತ ಎಲ್ಲರ ಚಿತ್ತ

Karur Stampede: ಸ್ವತಂತ್ರ ತನಿಖೆ ಕೋರಿ ಸುಪ್ರೀಂ ಕೋರ್ಟ್‌ ಕದ ತಟ್ಟಿದ ನಟ ವಿಜಯ್‌ ಪಕ್ಷ

ಪಟಾಕಿ ಕಾರ್ಖಾನೆಯಲ್ಲಿ ಮತ್ತೊಂದು ದುರಂತ: ಸ್ಫೋಟ ಸಂಭವಿಸಿ ಆರು ಮಂದಿ ಕಾರ್ಮಿಕರು ಸಜೀವ ದಹನ

ಪಾಕ್‌ನಲ್ಲಿ ರಕ್ತದೋಕುಳಿ: ಎನ್‌ಕೌಂಟರ್‌ ವೇಳೆ 11 ಯೋಧರು ಸೇರಿ 30 ಮಂದಿ ಸಾವು

ಕಮಲದ ವಿನ್ಯಾಸದಲ್ಲಿ ತಯಾರಾದ ಮುಂಬೈನ ಹೊಸ ವಿಮಾನ ನಿಲ್ದಾಣ ಉದ್ಘಾಟಿಸಿದ ಮೋದಿ

ಮುಂದಿನ ಸುದ್ದಿ
Show comments